Advertisement
ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಸುಮಾರು 2 ಲಕ್ಷಕ್ಕೂ ಅಧಿಕ. ಒಟ್ಟು 7 ಲಕ್ಷ ಸರಕಾರಿ ಹುದ್ದೆಗಳಲ್ಲಿ ಸುಮಾರು 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಆಯಾ ಇಲಾಖೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಅಗತ್ಯಕ್ಕೆ ತಕ್ಕಂತೆ ನೇಮಕ ಮಾಡಿಕೊಳ್ಳುತ್ತದೆ. ಸಿ ಮತ್ತು ಡಿ ದರ್ಜೆಯ ಹುದ್ದೆಗಳನ್ನು ಇಲಾಖಾವಾರು ನೇಮಕ ಮಾಡಿಕೊಳ್ಳಲಾಗುತ್ತದೆ.
ಯಾವುದೇ ಹೊಸ ನೇಮಕಾತಿ ಮಾಡಿಕೊಳ್ಳಬೇಕಿ ದ್ದರೂ ಹಣಕಾಸು ಇಲಾಖೆ ಒಪ್ಪಿಗೆ ಪಡೆಯುವುದು ಕಡ್ಡಾಯ. ಆದರೆ ಈ ಬಾರಿ ರಾಜ್ಯದ ಆದಾಯದ ಮೇಲೆ ಭಾರೀ ಪೆಟ್ಟು ಬೀಳುತ್ತಿದೆ. ಹೀಗಾಗಿ ಹಣಕಾಸು ಇಲಾಖೆ ಹೊಸ ಯೋಜನೆಗಳಿಗೆ ಅನುಮೋದನೆ ನೀಡದಂತೆ ಈಗಾಗಲೇ ಸುತ್ತೋಲೆ ಹೊರಡಿಸಿದೆ. ಹೊಸ ನೇಮಕಾತಿಗಳ ಸಂಬಂಧವಾಗಿಯೂ ಇದೇ ಸೂಚನೆ ಮುಂದುವರಿಯುವ ಸಾಧ್ಯತೆ ಇದೆ.
Related Articles
Advertisement
ಕೋವಿಡ್ 19 ನಿಯಂತ್ರಿಸುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯಾಗಿರುವುದರಿಂದ ಸರಕಾರ ನೇಮಕಾತಿಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಿದೆ. ಮುಂದೆ ನೇಮಕಾತಿ ವಿಚಾರ ಸರಕಾರದ ಆರ್ಥಿಕ ಪರಿಸ್ಥಿತಿ ಆಧರಿಸಿ ತೀರ್ಮಾನ ಆಗುತ್ತದೆ. ಅದು ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ನೋಡಬೇಕು.-ಷಡಕ್ಷರಿ ಸ್ವಾಮಿ,
ಕೆಪಿಎಸ್‌ಸಿ ಅಧ್ಯಕ್ಷ -ಶಂಕರ ಪಾಗೋಜಿ