Advertisement

ಕುಂದಾಪುರ ನಗರ ಪೊಲೀಸ್‌ ಠಾಣೆಯ ಎಎಸ್‌ಐಗೂ ಕೋವಿಡ್ ಸೋಂಕು ದೃಢ

05:07 PM Jul 18, 2020 | sudhir |

ಕುಂದಾಪುರ: ಇಲ್ಲಿನ ನಗರ ಪೊಲೀಸ್‌ ಠಾಣೆಯ ಎಎಸ್‌ಐ ಒಬ್ಬರಲ್ಲಿ ಕೋವಿಡ್ ಸೋಂಕು ದೃಢವಾಗಿದೆ. ಮುಂಜಾಗ್ರತಾ ಕ್ರಮವಾಗಿ ಠಾಣೆಯನ್ನು ಒಂದು ದಿನದ ಮಟ್ಟಿಗೆ ಪ್ರವಾಸಿ ಮಂದಿರಕ್ಕೆ ಸ್ಥಳಾಂತರಿಸಲಾಗಿದ್ದು, ಸ್ಯಾನಿಟೈಸ್‌ ಮಾಡಲಾಗಿದೆ.

Advertisement

ಹೈವೇ ಪೆಟ್ರೋಲ್‌ ವಾಹನದಲ್ಲಿ ಕರ್ತವ್ಯದಲ್ಲಿದ್ದ ಎಎಸ್‌ಐ ಅವರ ಕರ್ತವ್ಯ ಪಾಳಿ ಜು.10 ಕ್ಕೆ ಮುಗಿದಿತ್ತು. ಇವರು ಕರ್ತವ್ಯ ನಿರ್ವಹಿಸುತ್ತಿದ್ದ ವಾಹನದಲ್ಲಿನ ಇನ್ನೊಂದು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಹಾಗೂ ಮತ್ತೋರ್ವ ಎಎಸ್‌ಐ ಅವರಿಗೆ ಸೋಂಕು ದೃಢವಾಗಿದ್ದ ಹಿನ್ನೆಲೆಯಲ್ಲಿ ಇವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಶನಿವಾರ ಬಂದಿರುವ ವರದಿಯಲ್ಲಿ ಸೋಂಕು ಇರುವುದು ಖಚಿತಗೊಂಡಿದೆ.

ಸೋಂಕಿತ ಎಎಸ್‌ಐ ಅವರೊಂದಿಗೆ ಕೆಲ ದಿನಗಳ ಹಿಂದೆ ಠಾಣೆಯ ಪಿಎಸ್‌ಐ ಹಾಗೂ ಕೆಲ ಸಿಬಂದಿ ಸಂಪರ್ಕಿತರಾಗಿದ್ದರಿಂದ ಅವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next