Advertisement
ತಜ್ಞರ ವರದಿಯು ಸೋಮವಾರ ಕೈ ಸೇರಬಹುದು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದರು. ಆದರೆ ಮೂಲ ಪತ್ತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಜ್ಞ ವೈದ್ಯಕೀಯ ತಂಡದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಿದ್ದು, ಈ ಸಭೆಯಲ್ಲಿ ತಜ್ಞರ ತಂಡವು ವರದಿ ಸಲ್ಲಿಕೆಗೆ ಮತ್ತಷ್ಟು ಕಾಲಾವಕಾಶ ಕೋರಿದೆ.ಈ ಬಗ್ಗೆ ಮಾತ ನಾಡಿರುವ ಜಿಲ್ಲಾ ಉಸ್ತುವಾರಿ ಸಚಿವರು, ಜನರಲ್ಲಿ ಸಂಶಯ ನಿವಾರಣೆ ಆಗತ್ಯ ಇರುವುದರಿಂದ, ಸೋಂಕಿನ ಮೂಲ ಪತ್ತೆ ಹಚ್ಚುವುದು ಅನಿವಾರ್ಯವಾಗಿದ್ದು, ಇದರ ಬಗ್ಗೆ ಮತ್ತಷ್ಟು ವಿವರಣೆ ಪಡೆಯಬೇಕು ಎಂದರು.
ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿಗಳು ಮಾತನಾಡಿ, ಬಂಟ್ವಾಳ, ಫಸ್ಟ್ ನ್ಯೂರೋ ಹಾಗೂ ಬೋಳೂರು ಪ್ರಕರಣಗಳಿಗೆ ಸಂಬಂಧಿಸಿದಂತೆ 1,000ಕ್ಕೂ ಅಧಿಕ ಮಂದಿಯ ಗಂಟಲ ದ್ರವ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 17 ಖಚಿತ ಪ್ರಕರಣಗಳು ಕಂಡುಬಂದಿದ್ದು, ಈ ಪೈಕಿ 8 ಬಂಟ್ವಾಳ, 3 ಫಸ್ಟ್ ನ್ಯೂರೋ ಹಾಗೂ 6 ಬೋಳೂರು ಪ್ರದೇಶಕ್ಕೆ ಸಂಬಂಧಿಸಿವೆ ಎಂದರು.
ಫಸ್ಟ್ ನ್ಯೂರೋ ಸಿಬಂದಿಯೊಬ್ಬರಿಗೆ ಪಾಸಿಟಿವ್ ಬಂದ ಮೇಲೆ ಅವರ ಸಂಪರ್ಕದಲ್ಲಿದ್ದ ಎಲ್ಲರನ್ನೂ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಫಸ್ಟ್ ನ್ಯೂರೋದಲ್ಲಿ ಕೇರಳದ ಹಲವಾರು ಮಂದಿ ಚಿಕಿತ್ಸೆ ಪಡೆದು ತೆರಳಿದ್ದರು. ಅವರ ಗಂಟಲ ದ್ರವ ತಪಾಸಣೆ ಅಗತ್ಯವಾಗಿದ್ದು, ಕೇರಳ ಸರಕಾರದ ಜತೆ ಸಂಪರ್ಕಿಸಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಿಎಚ್‌ಒ ತಿಳಿಸಿದರು.