ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 42,766 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದೆ. ಇದೇ ಅವಧಿಯಲ್ಲಿ 308 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾನುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,29,88,673ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 440533ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 410048ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 38,091 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,21,38,092ಕ್ಕೆ ತಲುಪಿದೆ.
ಇದನ್ನೂ ಓದಿ:ಜನರು ಆತಂಕ ಪಡುವ ಅಗತ್ಯವಿಲ್ಲ: ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ: ಶಶಿಕಲಾ ಜೊಲ್ಲೆ
ಇನ್ನು ಭಾರತದಲ್ಲಿ ಒಂದೇ 17,47,476 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಇದುವರೆಗೆ ಒಟ್ಟು 53,00,58,218 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಸೆಪ್ಟೆಂಬರ್ 04ರಂದು ದೇಶದಲ್ಲಿ 71,61,760 ಜನರಿಗೆ ಕೋವಿಡ್ ಲಸಿಕೆ ಡೋಸ್ ನೀಡಲಾಗಿದ್ದು, ಈ ಮೂಲಕ ಒಟ್ಟಾರೆ 68,46,69,521 ಜನರಿಗೆ ಲಸಿಕೆ ಡೋಸ್ ನೀಡಲಾಗಿದೆ.