Advertisement

ದೇಶದಲ್ಲಿವೆ 34,87,229 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳು!

11:13 AM May 05, 2021 | Team Udayavani |

ಹೊಸದಿಲ್ಲಿ: ದೇಶದ ಕೋವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿದ ವರದಿಯ ಪ್ರಕಾರ ದೇಶದಲ್ಲಿ ಸದ್ಯ 34,87,229 ಸಕ್ರಿಯ ಕೋವಿಡ್ ಪ್ರಕರಣಗಳಿವೆ.

Advertisement

ದೇಶದಲ್ಲಿ ಕಳೆದ 24  ಗಂಟೆಯಲ್ಲಿ 3,82,315 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದೆ.

ಇದೇ ವೇಳೆ 3780 ಮಂದಿ ಕೋವಿಡ್ 19 ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ ವರ್ಷ ಕೋವಿಡ್ ಸೋಂಕು ಆರಂಭವಾದ ದಿನದಿಂದ ಒಂದು ದಿನದ ಹೆಚ್ಚು ಸಾವಿನ ಸಂಖ್ಯೆ ಇದಾಗಿದೆ. ದೇಶದಲ್ಲಿ  ಒಟ್ಟು ಸಾವನ್ನಪ್ಪಿದ ಕೋವಿಡ್ 19 ಸೋಂಕಿತರ ಸಂಖ್ಯೆ 2,26,188ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ ಹೆಚ್ಚು ಸಾವು ಸಂಭವಿಸಿದೆ. 891 ಮಂದಿ ಸೋಂಕಿತರು ಮಹಾರಾಷ್ಟ್ರದಲ್ಲಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದಲ್ಲಿ 351 ಮಂದಿ ಮೃತಪಟ್ಟದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next