ಹೊಸದಿಲ್ಲಿ: ದೇಶದ ಕೋವಿಡ್ -19 ಸೋಂಕು ಪ್ರಕರಣಗಳ ಸಂಖ್ಯೆ 50 ಲಕ್ಷದ ಗಡಿಯತ್ತ ಸಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 89,809 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, 1,054 ಮಂದಿ ಸಾವನ್ನಪ್ಪಿದ್ದಾರೆ.
ದೇಶದ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 49,30,236ಕ್ಕೆ ಏರಿಕೆಯಾಗಿದೆ. ಇದುವರೆಗೆ 38,59,399 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರೆ, 9,90,061 ಸಕ್ರಿಯ ಪ್ರಕರಣಗಳಿವೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1054 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಕೋವಿಡ್ ಸೋಂಕಿತರ ಒಟ್ಟು ಸಾವಿನ ಸಂಖ್ಯೆ 80,776ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ದೇಶಾದ್ಯಂತ ಸೆಪ್ಟೆಂಬರ್ 25ರಿಂದ ಮತ್ತೆ ಲಾಕ್ ಡೌನ್ ಇಲ್ಲ: ಫ್ಯಾಕ್ಟ್ ಚೆಕ್ ನಲ್ಲಿ ಸತ್ಯ ಬಯಲು
ಕೋವಿಡ್ ಸೋಂಕಿನಿಂದ ಗುಣಮುಖರಾದವರ ಪಟ್ಟಿಯಲ್ಲಿ ಭಾರತದ ಅಗ್ರ ಸ್ಥಾನದಲ್ಲಿದೆ. ಬ್ರಿಜಿಲ್ ನಲ್ಲಿ 37, 80,107 ಮಂದಿ ಗುಣಮುಖರಾಗಿದ್ದು, ಎರಡನೇ ಸ್ಥಾನದಲ್ಲಿದೆ.