ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 4,518 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, 9 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜೂನ್ 06) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಹುಬ್ಬಳ್ಳಿ: ಬರ್ತ್ ಡೇ ಪಾರ್ಟಿಯಲ್ಲಿ ಆರು ಸುತ್ತು ಗುಂಡು ಹಾರಿಸಿ ಸಂಭ್ರಮಾಚರಣೆ!
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 25,782ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ ಭಾರತದಲ್ಲಿ 1,730 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.
ಒಂದೇ ದಿನದಲ್ಲಿ 2,779 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಒಟ್ಟು 4,26,30,852 ಮಂದಿ ಗುಣಮುಖರಾಗಿದ್ದಾರೆ ಎಂದು ಅಂಕಿಅಂಶ ವಿವರಿಸಿದೆ.
ಭಾರತದಲ್ಲಿ ಕೋವಿಡ್ 19 ಚೇತರಿಕೆ ದರ ಶೇ.98.73ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.1.62ರಷ್ಟಿದೆ ಮತ್ತು ವಾರದ ಪಾಸಿಟಿವಿಟಿ ದರ ಶೇ.0.91ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.