ಲಕ್ನೋ: ಗಾಜಿಯಾಬಾದ್ ಮತ್ತು ಗೌತಮ್ ಬುದ್ದ ನಗರದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸರ್ಕಾರ ಶನಿವಾರ (ಏಪ್ರಿಲ್ 16) ಎನ್ ಸಿಆರ್ ಜಿಲ್ಲೆಗಳಲ್ಲಿ ಹೈ ಅಲರ್ಟ್ ನಲ್ಲಿ ಇಟ್ಟಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ದಂಗಲ್, ಬಾಹುಬಲಿ 2 ದಾಖಲೆ ಮುರಿದ ಕೆಜಿಎಫ್; 2 ದಿನದಲ್ಲಿ ಯಶ್ ಸಿನಿಮಾ ಗಳಿಸಿದ್ದೆಷ್ಟು?
ಉತ್ತರಪ್ರದೇಶದ ಕೋವಿಡ್ 19 ನಿರ್ವಹಣಾ ಮಂಡಳಿಯ ಜತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಭೆ ನಡೆಸಿದ ನಂತರ ಈ ತೀರ್ಮಾನ ತೆಗೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ರಾಜ್ಯದ ನೆರೆಯ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇದರಿಂದಾಗಿ ಎನ್ ಸಿಆರ್ ಜಿಲ್ಲೆಗಳಲ್ಲಿ ಪರಿಣಾಮ ಬೀರಿದೆ. ಈ ನಿಟ್ಟಿನಲ್ಲಿ ಕೋವಿಡ್ 19 ಸೋಂಕಿತರ ಮಾದರಿಯನ್ನು ಪರೀಕ್ಷಿಸುವಂತೆ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಗೌತಮ್ ಬುದ್ಧ ನಗರದಲ್ಲಿ 70 ಕೋವಿಡ್ ಪ್ರಕರಣಗಳು ಹಾಗೂ ಗಾಜಿಯಾಬಾದ್ ನಲ್ಲಿ 11 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡುವಿಕೆಯನ್ನು ತ್ವರಿತಗೊಳಿಸಬೇಕೆಂದು ಸಿಎಂ ಯೋಗಿ ಸೂಚನೆ ನೀಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.