Advertisement

ತಾಲೂಕಾ ವೈದ್ಯಾಧಿಕಾರಿಗೆ ಕೋವಿಡ್‌ ಸೋಂಕಿಗೆ ಬಲಿ

01:57 AM Sep 03, 2020 | Hari Prasad |

ಮುಂಡರಗಿ (ಗದಗ): ಕೋವಿಡ್ 19 ಸೋಂಕಿಗೆ ಒಳಗಾಗಿದ್ದ ತಾಲೂಕು ವೈದ್ಯಾಧಿಕಾರಿ ಡಾ| ಬಸವರಾಜ ಕೆ. (45) ಅವರು ಚಿಕಿತ್ಸೆ ಫಲಿಸದೇ ಬುಧವಾರ ನಿಧನರಾಗಿದ್ದಾರೆ.

Advertisement

ಮೃತರು ಪತ್ನಿ, ಇಬ್ಬರು ಪುತ್ರರು, ತಂದೆ-ತಾಯಿ ಹಾಗೂ ಸಹೋದರರನ್ನು ಅಗಲಿದ್ದಾರೆ.

ಕಳೆದ ಕೆಲ ದಿನಗಳಿಂದ ಕೋವಿಡ್ 19 ಸೋಂಕಿನಿಂದ ನಿಂದ ಬಳಲುತ್ತಿದ್ದ ಡಾ| ಬಸವರಾಜ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಳೆದ ಮಾರ್ಚ್ ಮಾರ್ಚ್‌ನಿಂದ ತಾಲೂಕಿನಲ್ಲಿ ಕೋವಿಡ್ 19 ಸೋಂಕು ತಡೆಯುವಲ್ಲಿ ಅಪ್ಪಟ ಯೋಧರಂತೆ ಹಗಲಿರುಳು ಶ್ರಮಿಸಿದ್ದರು.

ತಾಲೂಕಿನಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಮಧ್ಯೆಯೂ ಸಾರ್ವಜನಿಕರಿಗೆ ಅತ್ಯತ್ತಮವಾಗಿ ವೈದ್ಯಕೀಯ ಸೇವೆ ಒದಗಿಸುತ್ತಿದ್ದರು.

Advertisement

ಈ ನಡುವೆ, ಆಗಸ್ಟ್ 2ರಂದು ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಡಾ| ಬಸವರಾಜ್ ಅವರಿಗೆ ಆ.9ರಂದು ಕೋವಿಡ್ ಸೋಂಕು ದೃಢ ಪಟ್ಟಿತ್ತು.

ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ, ಚಿಕಿತ್ಸೆ ಫಲಿಸದೇ, ಬುಧವಾರ ಸಂಜೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಡಾ|ಬಸವರಾಜ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಯಡ್ರಾಮಿ ಗ್ರಾಮದವರಾಗಿದ್ದು, ಕೆಲ ವರ್ಷಗಳಿಂದ ಮುಂಡರಗಿ ತಾಲೂಕು ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next