ಬೆಂಗಳೂರು: ಶುಕ್ರವಾರ ಸಾಯಂಕಾಲದಿಂದ ಶನಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8364 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 10815 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 114 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 5,11,346ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 4,04,841 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ಗಡಿಯನ್ನು ತಲುಪಿದೆ. ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 98,564ಸಕ್ರಿಯ ಸೋಂಕು ಪ್ರಕರಣಗಳಿವೆ.
ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 7922 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 822 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 3733 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.