Advertisement

ಮೇ.10ರ ವರೆಗೆ ಉತ್ತರ ಪ್ರದೇಶದಲ್ಲಿ ಕರ್ಫ್ಯೂ ಮುಂದುವರಿಕೆ

01:18 PM May 05, 2021 | Team Udayavani |

ಲಕ್ನೋ: ಕೋವಿಡ್ ಪ್ರಕರಣಗಳಲ್ಲಿ ಇಳಿಮುಖವಾಗದ ಹಿನ್ನೆಲೆ ಸದ್ಯ ಜಾರಿಯಲ್ಲಿರುವ ಕರ್ಫ್ಯೂವನ್ನು ಮೇ.10ರ ವರೆಗೆ ಮುಂದುವರೆಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ.

Advertisement

ಇಂದು ( ಮೇ.05) ಮಾಧ್ಯಮಗಳ ಎದುರು ಈ ವಿಷಯ ತಿಳಿಸಿರುವ ಸರ್ಕಾರ, ಮೇ.10ರ ಮುಂಜಾನೆ 7 ಗಂಟೆಯ ವರೆಗೆ ರಾಜ್ಯಾದ್ಯಂತ ಕರ್ಫ್ಯೂ ಮುಂದುವರೆಯಲಿದೆ ಎಂದಿದ್ದಾರೆ.

ನೂತನ ಮಾರ್ಗಸೂಚಿಯನ್ವಯ ಎಲ್ಲ ಅಂಗಡಿ-ಮುಂಗಟ್ಟುಗಳು ಮೇ.10ರ ಮುಂಜಾನೆ 7 ವರೆಗೆ ಬಂದ್ ಆಗಲಿವೆ. ಕೋವಿಡ್ ಸರಪಳಿ ತುಂಡರಿಸುವ ಉದ್ದೇಶದಿಂದ ಕರ್ಫ್ಯೂ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ಹಾಗೂ ಲಸಿಕಾ ಅಭಿಯಾನ ಮುಂದುವರೆಯಲಿದೆ ಎಂದಿದ್ದಾರೆ.

ಇನ್ನು ಉತ್ತರ ಪ್ರದೇಶದಲ್ಲಿ ಮಹಾಮಾರಿ ಕೋವಿಡ್ ಸೋಂಕು ವ್ಯಾಪಕವಾಗಿ ಹಬ್ಬಿದ ಹಿನ್ನೆಲೆ ಏಪ್ರಿಲ್ 29 ರಂದು ಮೊದಲ ಬಾರಿಗೆ ರಾಜ್ಯಾದ್ಯಂತ ವಾರಾಂತ್ಯದ ಲಾಕ್ ಡೌನ್ ಘೋಷಣೆ ಮಾಡಲಾಯಿತು. ನಂತರದ ದಿನಗಳಲ್ಲಿ ಲಾಕ್ ಡೌನ್ ಮಾದರಿಯ ಕರ್ಫ್ಯೂ ಜಾರಿ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next