Advertisement

ಹಳ್ಳಿಗಳತ್ತ ಮುಖ ಮಾಡಿದೆ ಕೋವಿಡ್‌ 19

06:40 AM Jul 09, 2020 | Lakshmi GovindaRaj |

ತುಮಕೂರು: ಕಲ್ಪತರು ನಾಡಿನಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ನಗರ ಪ್ರದೇಶಗಳಲ್ಲಿ ಮಾತ್ರ ಗೋಚರ ವಾಗುತ್ತಿದ್ದ ಈ ಕೋವಿಡ್‌ 19 ಸೋಂಕು ಈಗ ಹಳ್ಳಿಗಳತ್ತ ಮುಖ ಮಾಡಿದೆ. ಹಳ್ಳಿ ಜನರಲ್ಲಿಯೂ ಸೋಂಕು  ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸೋಂಕಿತರಿಗೆ ತಾಲೂಕು ಕೇಂದ್ರಗಳಲ್ಲಿಯೇ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

Advertisement

ಹಳ್ಳಿಯತ್ತ ಕೋವಿಡ್‌ 19: ಜಿಲ್ಲೆಯಲ್ಲಿ ಅಲ್ಲೊಂದು ಇಲ್ಲೊಂದು ಕಾಣಿಸಿ ಕೊಳ್ಳುತ್ತಿದ್ದ ಕೋವಿಡ್‌-19 ಸೋಂಕು ಈಗ ದಿನವೂ 30 – 40 ಜನರಲ್ಲಿ ಕಾಣಿಸಿ ಕೊಳ್ಳುತ್ತಿದೆ. ಈಗ ಬರುತ್ತಿರುವ ಸೋಂಕಿತರು ಬಹುತೇಕ ಗ್ರಾಮೀಣ ಪ್ರದೇಶದ  ಹಳ್ಳಿಯವರೇ ಆಗು ತ್ತಿದ್ದು, ಸೋಂಕು ಇರುವವರನ್ನು ಈ ವರೆಗೆ ಜಿಲ್ಲಾ ಕೋವಿಡ್‌-19 ಆಸ್ಪತ್ರಗೆ ಕರೆತಂದು ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು.

ತಾಲೂಕು ಕೇಂದ್ರದಲ್ಲೇ ಚಿಕಿತ್ಸೆ: ಆದರೆ ಈಗ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಇನ್ನೂ ಸೋಂಕಿತರು ಹೆಚ್ಚುವ ಸಾಧ್ಯತೆ ಇರುವುದರಿಂದ ಎಲ್ಲಾ ಸೋಂಕಿತರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ  ನೀಡಲು ಸಾಧ್ಯವಾಗುವುದಿಲ್ಲ ಎಂದು ತಾಲೂಕು ಕೇಂದ್ರದಲ್ಲಿಯೇ ವ್ಯವಸ್ಥೆ ಮಾಡಲಾಗುತ್ತಿದೆ.

350 ಹಾಸಿಗೆ ಸಿದ್ಧ: ಈವರೆಗೆ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌-19 ಚಿಕಿತ್ಸೆಗಾಗಿ ಈಗಾಗಲೇ 200 ಹಾಸಿಗೆಗಳ ವ್ಯವಸ್ಥೆಯಿದ್ದು, ಜಿಲ್ಲಾ ಆಸ್ಪತ್ರೆ ಯಲ್ಲಿ ಈಗ 215 ಜನ ಚಿಕಿತ್ಸೆ ಪಡೆಯು ತ್ತಿದ್ದಾರೆ. ಈಗ ಹೆಚ್ಚುತ್ತಿರುವ ಸೋಂಕು ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 150 ಸೇರಿ ಒಟ್ಟು 350 ಹಾಸಿಗೆಗಳನ್ನು ಜಿಲ್ಲಾಡಳಿತ ಸಿದ್ಧಪಡಿಸಿದೆ.

ಖಾಸಗಿ ಆಸ್ಪತ್ರೆಗೆ ಜತೆ ಚರ್ಚೆ: ಅದೇ ರೀತಿ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ಕನಿಷ್ಠ 50 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಖಾಸಗಿ ಎರಡು ವೈದ್ಯಕೀಯ ಕಾಲೇಜುಗಳಲ್ಲಿ 500 ಹಾಸಿಗೆಗಳು ಲಭ್ಯವಿದ್ದು, ಖಾಸಗಿ  ಆಸ್ಪತ್ರೆಗಳಿಗೂ  ಹಾಸಿಗೆಗಳ ವ್ಯವಸ್ಥೆ ಒದಗಿ ಸಲು ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ ಖಾಸಗಿ ಆಸ್ಪತ್ರೆಯವರೊಂದಿಗೆಯೂ ಹೆಚ್ಚು ಸೋಂಕಿತರು ಕಂಡು ಬಂದರೆ ವ್ಯವಸ್ಥೆ ಕಲ್ಪಿಸುವ ಕುರಿತು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ ಕುಮಾರ್‌ ಮಾತುಕತೆ  ನಡೆಸಿದ್ದಾರೆ.

Advertisement

93 ಕೋವಿಡ್‌ ಕೇರ್‌ ಸೆಂಟರ್‌: ಜಿಲ್ಲೆಯಲ್ಲಿ ರೋಗ ಲಕ್ಷಣಗಳು ಹೆಚ್ಚು ಉಲ್ಬಣ ವಾಗುತ್ತಿರುವ ಹಿನ್ನೆಲೆಯಲ್ಲಿ 93 ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆದಿದ್ದು, ಈ ಸೆಂಟರ್‌ ನಲ್ಲಿ ರೋಗ ಲಕ್ಷಣಗಳಿಲ್ಲದ ಅಥವಾ ಸಣ್ಣ- ಪುಟ್ಟ  ಕಾಯಿಲೆಯಿಂದ ಬಳಲುತ್ತಿರು ವವರಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ.

ಅನಾಹುತ ತಡೆಗಟ್ಟಿ: ಕೋವಿಡ್‌ 19 ರೋಗ ಲಕ್ಷಣಗಳು ಕಂಡುಬಂದರೆ ರೋಗಿಗಳಿಗೆ ಮನೆಯಲ್ಲಿಯೇ ಸ್ವಯಂ ಔಷಧೋಪ ಚಾರದ ಪ್ರಯೋಗ ಮಾಡಿ ರೋಗ ಉಲ್ಬಣ ವಾಗಿ ಅಸಹಾಯಕ ಸ್ಥಿತಿ ತಲುಪಿದಾಗ ಆಸ್ಪತ್ರೆಗೆ ಕರೆತರದೇ  ರೋಗಿಯನ್ನು ತಕ್ಷಣವೇ ಕರೆ ತಂದು ಕೋವಿಡ್‌ 19 ಪರೀಕ್ಷೆಗೊಳಪಡಿಸು ವುದರಿಂದ ಮುಂದೆ ಆಗುವ ಅನಾಹುತ ಗಳನ್ನು ತಡೆಯಬಹುದು.

ಜಿಲ್ಲೆಯಲ್ಲಿ ಈಗಾಗಲೇ ಸೋಂಕು ಗ್ರಾಮಗಳಿಗೂ ಕಾಲಿಟ್ಟಿರು ವುದರಿಂದ ಸಾರ್ವಜನಿಕರು ತಮ್ಮ ಕುಟುಂಬದ ಸದಸ್ಯನೇ ಆಗಿದ್ದರೂ ಸಹ ಹೊರಗಿ ನಿಂದ ಬಂದವರನ್ನು ತಪಾಸಣೆಗೊಳಪಡಿಸದೇ ಮನೆಯಲ್ಲಿಟ್ಟುಕೊಳ್ಳಬಾರದು. ಹೊರ ಜಿಲ್ಲೆಯಿಂದ ಬರುವವರ ಬಗ್ಗೆ ಜಿಲ್ಲಾಡಳಿತ ಅಥವಾ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಸಹಕರಿಸಬೇಕು. 
-ಡಾ.ಕೆ.ರಾಕೇಶ್‌ ಕುಮಾರ್‌, ಡೀಸಿ

Advertisement

Udayavani is now on Telegram. Click here to join our channel and stay updated with the latest news.

Next