Advertisement

ಕೋವಿಡ್ ಸುಳ್ಳು: ಅಮಿತ್‌ ಶಾ 2015ರ ಫೋಟೋ ಈಗ ವೈರಲ್‌

09:37 AM Mar 29, 2020 | Hari Prasad |

ಕೋವಿಡ್ 19 ವೈರಸ್ ವ್ಯಾಪಿಸುತ್ತಿರುವಷ್ಟೇ ವೇಗದಲ್ಲಿ ಅದರ ಕುರಿತಾದ ಸುಳ್ಳು ಸುದ್ದಿಗಳೂ ವ್ಯಾಪಿಸುತ್ತಿವೆ. ಸಾಮಾಜಿಕ ಜಾಲತಾಣಗಳ‌ಲ್ಲಿ ಹಬ್ಬುತ್ತಿರುವ ಸುದ್ದಿಗಳ ಸತ್ಯದರ್ಶನ ಇಲ್ಲಿರುತ್ತದೆ.

Advertisement

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕೋವಿಡ್ 19 ವೈರಸ್ ಸೋಂಕಿತರು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ ಮತ್ತು ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾದ ಫೋಟೋವೊಂದು ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಆದರೆ, ಇದು 2015ರಲ್ಲಿ ಸೆರೆಹಿಡಿಯಲಾದ ಫೋಟೋ ಎಂಬ ಸತ್ಯ ಬಹಿರಂಗವಾಗಿದೆ. ಐದು ವರ್ಷಗಳ ಹಿಂದೆ ಮಧ್ಯಪ್ರದೇಶದ ಕಣ್ಣಿನ ಆಸ್ಪತ್ರೆಯೊಂದನ್ನು ಉದ್ಘಾಟಿಸುವ ಸಲುವಾಗಿ ಅಮಿತ್‌ ಶಾ ಅವರು ಆಸ್ಪತ್ರೆಗೆ ತೆರಳಿದ್ದರು. ಆಗ ನೀಲಿ ಬಣ್ಣದ ಗೌನ್‌ ತೊಟ್ಟು, ಆಸ್ಪತ್ರೆಯ ಕಾರಿಡಾರ್‌ನಲ್ಲಿ ವೈದ್ಯರೊಂದಿಗೆ ಮಾತನಾಡುತ್ತಿದ್ದ ಅವರ ಫೋಟೋಗಳು ಸುದ್ದಿಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದವು.

ಈಗ ಯಾರೋ ಕಿಡಿಗೇಡಿಗಳು ಆ ಫೋಟೋವನ್ನು ಬಳಸಿಕೊಂಡು, ಅಮಿತ್‌ ಶಾ ಅವರು ದೇಶದಲ್ಲಿ ಕೊರೊನಾ ಪ್ರಕರಣ ಪತ್ತೆಯಾದ ಬಳಿಕ ಆಸ್ಪತ್ರೆಗೆ ತೆರಳಿ, ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ ಎಂಬ ಅಡಿಬರಹವನ್ನು ಬರೆದು ಅದನ್ನು ವೈರಲ್‌ ಮಾಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next