Advertisement
ಶುಕ್ರವಾರ ಸೋಂಕು ದೃಢಪಟ್ಟವರ ಪೈಕಿ ನಿಜಾಮುದ್ಧಿನ್ ತಬ್ಲಿ ಜಮಾತ್‌ನಲ್ಲಿ ಭಾಗವಹಿಸಿದ್ದ ಬೆಳಗಾವಿಯ ಮೂವರು ಪುರುಷರು, ಮತ್ತೂಬ್ಬ ಬಾಗಲಕೋಟೆಯ ವೃದ್ಧ ಸೇರಿದ್ದಾನೆ. ಈ ಮೂಲಕ ರಾಜ್ಯದ ಮತ್ತೆರಡು ಜಿಲ್ಲೆಗೆ ಸೋಂಕು ಕಾಲಿಟ್ಟಿದೆ. ಒಟ್ಟಾರೆ ರಾಜ್ಯದ 15 ಜಿಲ್ಲೆಗಳಲ್ಲಿ ಸೋಂಕು ವ್ಯಾಪಿಸಿದಂತಾಗಿದೆ. ಆರೋಗ್ಯ ಇಲಾಖೆಯು ಸೋಂಕಿತ ವ್ಯಕ್ತಿಗಳೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದ್ದ ವ್ಯಕ್ತಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದು, ಅವರೆಲ್ಲರನ್ನೂ ಶಂಕಿತರು ಎಂದು ಗುರುತಿಸಿ ಮನೆಯಲ್ಲಿ ಮತ್ತು ಆಸ್ಪತ್ರೆಯಲ್ಲಿ ನಿಗಾ ವಹಿಸಲಿದ್ದು ಕಡ್ಡಾಯವಾಗಿ ಎಲ್ಲರಿಗೂ ಸೋಂಕು ಪರೀಕ್ಷೆ ನಡೆಸಲಾಗುವುದು.
ದಿಲ್ಲಿಯ ನಿಜಾಮುದ್ದೀನ್‌ನ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಪೈಕಿ ಕರ್ನಾಟಕದಿಂದ ಎಷ್ಟು ಮಂದಿ ಪಾಲ್ಗೊಂಡಿದ್ದರು ಎಂಬ ಬಗ್ಗೆ ಕೇಂದ್ರ ಸರಕಾರವು ಕರ್ನಾಟಕ ಸರಕಾರಕ್ಕೆ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ನಿರ್ದೇಶ ನೀಡಿದೆ. ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ ಮಧ್ಯಾಂತರ ಅರ್ಜಿಯನ್ನು ಶುಕ್ರವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಕೇಂದ್ರ ಸರಕಾರ ನೀಡುವ ಮಾಹಿತಿಯನ್ನು ಆಧರಿಸಿ ರಾಜ್ಯ ಸರಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರನ್ನು ಪತ್ತೆ ಹಚ್ಚಿ ಅವರ ಸ್ಥಿತಿ ಹೇಗಿದೆ, ಅವರಿಂದ ಯಾರಿಗೆಲ್ಲ ಸೋಂಕು ಹರಡಿದೆ ಎಂದು ಪತ್ತೆ ಹಚ್ಚಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶ ನೀಡಿತು. ಅಲ್ಲದೆ ಕೋವಿಡ್ 19 ವೈರಸ್ ಸೋಂಕು ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ನಿತ್ಯ ಹೆಲ್ತ್ ಬುಲೆಟಿನ್ ಅನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಹಾಗೆಯೇ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಪತ್ರಿಕೆಗಳಿಗೆ ಈ ವಿವರ ನೀಡಬೇಕು ಎಂದು ಸೂಚಿಸಿತು.
Related Articles
Advertisement