Advertisement

ನಾಲ್ಕನೇ ಅಲೆ ಭೀತಿ: 8582 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆ!

01:05 PM Jun 12, 2022 | Team Udayavani |

ಹೊಸದಿಲ್ಲಿ:  ಕಳೆದ 24 ಗಂಟೆ ಅವಧಿಯಲ್ಲಿ ಭಾರತ ದೇಶದಲ್ಲಿ 8582 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ವೇಳೆ ನಾಲ್ಕು ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

Advertisement

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 44,513ಗೆ ಏರಿಕೆಯಾಗಿದೆ. ಈ ಸಮಯದಲ್ಲಿ 4,435 ಮಂದಿ ಸೋಂಕಿತರು ಚೇರಿಸಿಕೊಂಡಿದ್ದು, ಒಟ್ಟು ಚೇತರಿಕೆ ಸಂಖ್ಯೆ 4,26,52,743 ಕ್ಕೆ ಏರಿಕೆಯಾಗಿದೆ. ದೇಶದ ರಿಕವರಿ ರೇಟ್ ಸದ್ಯ ಶೇ. 98.68 ರಷ್ಟಿದೆ.

ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 795 ಹೊಸ ಕೋವಿಡ್ ಸೋಂಕು ಪ್ರಕರಣ ವರದಿಯಾಗಿದೆ. ಈ ಅವಧಿಯಲ್ಲಿ ದೇಶದಲ್ಲಿ ಯಾವುದೇ ಸೋಂಕಿತರ ಸಾವಿನ ಬಗ್ಗೆ ವರದಿಯಾಗಿಲ್ಲ.

ಇದನ್ನೂ ಓದಿ:ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಪ್ರಮಾಣ ಇಳಿಮುಖ: ಮುಪ್ಪಾನೆ ತೀರದಲ್ಲಿ ಮೀನುಗಳ ಸಾವು

ಕರ್ನಾಟಕದಲ್ಲಿ ಶನಿವಾರ 562 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಇದರಲ್ಲಿ 545 ಪ್ರಕರಣಗಳು ಬೆಂಗಳೂರಿನಲ್ಲಿಯೇ ಪತ್ತೆಯಾಗಿದ್ದವು. ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ 2.07 ರಷ್ಟಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next