ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,827 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,13,413ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ( ಮೇ 12) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕೆ.ಎಲ್. ರಾಹುಲ್-ಅಥಿಯಾ ಶೆಟ್ಟಿ ಮದುವೆ ವದಂತಿ: ಸುನೀಲ್ ಶೆಟ್ಟಿ ಹೇಳಿದ್ದೇನು?
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 19,067ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ 19 ಸೋಂಕಿನಿಂದ 24 ಮಂದಿ ಸಾವನ್ನಪ್ಪಿದ್ದಾರೆ. ಒಂದೇ ದಿನದಲ್ಲಿ 3,230 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,70,165ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ 427 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.74ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.60ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.0.72ರಷ್ಟಿದೆ ಎಂದು ಅಂಕಿಅಂಶ ಹೇಳಿದೆ.