ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,841 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಈವರೆಗೆ 5,24,190 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಮೇ 13) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಯುವಕನ ಕೊಲೆಗೈದು ತಿರುಪತಿಯಲ್ಲಿ ಕೇಶ ಮುಂಡನ ಮಾಡಿಸಿಕೊಂಡ ಭೂಪರು
ದೇಶದಲ್ಲಿ 18,604 ಸಕ್ರಿಯ ಕೋವಿಡ್ ಪ್ರಕರಣಗಳಿವೆ. 24ಗಂಟೆಯಲ್ಲಿ ಭಾರತದಲ್ಲಿ 463 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 3,295 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಚೇತರಿಸಿಕೊಂವರ ಸಂಖ್ಯೆ 4,25,73,460ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ 98.74ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.58ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.0.69ರಷ್ಟಿದೆ ಎಂದು ಸಚಿವಾಲಯ ವಿವರಿಸಿದೆ.
ದೇಶದಲ್ಲಿನ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ 190.99 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಕಳೆದ 24ಗಂಟೆಯಲ್ಲಿ 4,86,628 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಅಂಕಿಅಂಶ ತಿಳಿಸಿದೆ.