ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 3,377 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 60 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಏಪ್ರಿಲ್ 29) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ನಾನು ಹಿಂದೂ ಎಂದು ಅಫ್ರಿದಿ ನನ್ನ ವಿರುದ್ಧ ಪಿತೂರಿ ಮಾಡಿದರು: ಕನೇರಿಯಾ
ದೇಶದಲ್ಲಿನ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,30,72,176ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ 19 ಸೋಂಕಿನಿಂದ ಈವರೆಗೆ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,23,753ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 17,801ಕ್ಕೆ ಹೆಚ್ಚಳವಾಗಿದೆ. 24ಗಂಟೆಯಲ್ಲಿ 2,496 ಮಂದಿ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,25,30,622ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 821 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ದೇಶದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.74ರಷ್ಟಿದೆ. ಪ್ರತಿ ದಿನದ ಪಾಸಿಟಿವಿಟಿ ದರ ಶೇ.0.91ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.0.63ರಷ್ಟಿರುವುದಾಗಿ ಅಂಕಿಅಂಶ ವಿವರಿಸಿದೆ.