Advertisement

ಭಾರತದಲ್ಲಿ 24ಗಂಟೆಯಲ್ಲಿ 3,545 ಕೋವಿಡ್ ಪ್ರಕರಣ ದೃಢ, 27 ಮಂದಿ ಸಾವು

11:40 AM May 06, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,545 ಕೋವಿಡ್ 19 ಪ್ರಕರಣಗಳು ದೃಢಪಟ್ಟಿದ್ದು, 27 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,002ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಮೇ 06) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಕೇಜ್ರಿವಾಲ್ ಗೆ ಬೆದರಿಕೆ; ಬಿಜೆಪಿ ನಾಯಕ ತೇಜಿಂದರ್ ಪಾಲ್ ಬಗ್ಗಾ ಬಂಧನ

ದೇಶದಲ್ಲಿ 19,688 ಸಕ್ರಿಯ ಕೋವಿಡ್ ಪ್ರಕರಣಗಳಿವೆ. 24ಗಂಟೆಯಲ್ಲಿ 31 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಒಂದೇ ದಿನದಲ್ಲಿ 3,549 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಒಟ್ಟು 4,25,51,248 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ಭಾರತದ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.74ರಷ್ಟಿದೆ. ಪ್ರತಿದಿನ ಪಾಸಿಟಿವಿಟಿ ದರ ಶೇ.0.76ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.0.79ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಭಾರತದಲ್ಲಿನ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 189.81 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. 24ಗಂಟೆಯಲ್ಲಿ 4,65,918 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next