Advertisement

ಭಾರತದಲ್ಲಿ 24 ಗಂಟೆಯಲ್ಲಿ 3,805 ಕೋವಿಡ್ ಪ್ರಕರಣ ದೃಢ, 22 ಮಂದಿ ಸಾವು

11:21 AM May 07, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,805 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದೆ. ಇದು ಶುಕ್ರವಾರ ವರದಿಯಾದ ಪ್ರಕರಣಕ್ಕಿಂತ (3,545) ಅಲ್ಪ ಪ್ರಮಾಣದ ಹೆಚ್ಚಳ ಕಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಮೇ 07) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಿದ್ದೇ ಬಿಜೆಪಿ ಸಾಧನೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 4,30,98,743ಕ್ಕೆ ಏರಿಕೆಯಾಗಿದೆ. ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 20,303ಕ್ಕೆ ಹೆಚ್ಚಳವಾಗಿದೆ. 24 ಗಂಟೆಯ ಅವಧಿಯಲ್ಲಿ 22 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ಕೋವಿಡ್ ನಿಂದ ಸಾವನ್ನಪ್ಪಿರುವವ ಸಂಖ್ಯೆ 5,24,024ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿನ ಕೋವಿಡ್ ಚೇತರಿಕೆ ದರ ಶೇ.98.74ರಷ್ಟಿದೆ. ಒಂದೇ ದಿನದಲ್ಲಿ 3,168 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶಾದ್ಯಂತ ಒಟ್ಟು 4,25,54,416 ಮಂದಿ ಗುಣಮುಖರಾಗಿದ್ದಾರೆ.

24 ಗಂಟೆಯಲ್ಲಿ 4,87,544 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.78ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.0.79ರಷ್ಟಿದೆ ಎಂದು ಅಂಕಿಅಂಶ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next