ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,157 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, 26 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಮೇ 2) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಲ್ಯಾಂಡ್ ಆಗುತ್ತಿದ್ದ ವಿಮಾನಕ್ಕೆ ಅಪ್ಪಳಿಸಿದ ಬಿರುಗಾಳಿ; 40 ಮಂದಿ ಪ್ರಯಾಣಿಕರಿಗೆ ಗಾಯ!
ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,30,79,188ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 19,500 ಸಕ್ರಿಯ ಕೋವಿಡ್ 19 ಪ್ರಕರಗಳು ದಾಖಲಾಗಿರುವುದಾಗಿ ವರದಿ ವಿವರಿಸಿದೆ.
24ಗಂಟೆಯಲ್ಲಿ 26 ಮಂದಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದ್ದು, ಈವರೆಗೆ ಒಟ್ಟು 5,23,869 ಮಂದಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಒಂದೇ ದಿನದಲ್ಲಿ 2,723 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.
Related Articles
ಭಾರತದಲ್ಲಿ ಈವರೆಗೆ ಕೋವಿಡ್ 19 ಸೋಂಕಿನಿಂದ 4,25,38,976 ಮಂದಿ ಚೇತರಿಸಿಕೊಂಡಿದ್ದಾರೆ. ಒಂದೇ ದಿನದಲ್ಲಿ 408 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗಿದೆ. ದೇಶದ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.74ರಷ್ಟಿದೆ.
ದಿನಂಪ್ರತಿ ಪಾಸಿಟಿವಿಟಿ ದರ ಶೇ.0.07ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.0.70ರಷ್ಟಿದೆ. ದೇಶಾದ್ಯಂತ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 189.23 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ರಾಜ್ಯದಲ್ಲಿ 104 ಪ್ರಕರಣ: ರಾಜ್ಯದಲ್ಲಿ 104 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,780ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ‘ಕೂ’ ಮಾಡಿದ್ದಾರೆ.
ಈ ಅವಧಿಯಲ್ಲಿ ಕೋವಿಡ್ ನಿಂದ ಒಬ್ಬರು ಮೃತಪಟ್ಟಿದ್ದಾರೆ. 108 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, 10,566 ಕೋವಿಡ್ ಟೆಸ್ಟ್ ನಡೆಸಲಾಗಿದೆ.
ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 0.98ರಷ್ಟಿದ್ದು, ಬೆಂಗಳೂರು ನಗರದಲ್ಲಿ 93 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,701 ಇದೆ.