ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 16,135 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 24 ಜನರು ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜುಲೈ 04) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಹಿಮಾಚಲ ಪ್ರದೇಶ: ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, ವಿದ್ಯಾರ್ಥಿಗಳು ಸೇರಿ 16 ಸಾವು
ಸಚಿವಾಲಯದ ಮಾಹಿತಿ ಪ್ರಕಾರ, ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 13,958 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,13,864ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಭಾರತದಲ್ಲಿ ಕೋವಿಡ್ ಸೋಂಕಿನ ಪ್ರತಿದಿನದ ಪಾಸಿಟಿವಿಟಿ ಪ್ರಮಾಣ ಶೇ.4.85ಕ್ಕೆ ಏರಿಕೆಯಾಗಿದೆ. ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾದ ಪರಿಣಾಮ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ಗಡಿ ದಾಟಿರುವುದಾಗಿ ಅಂಕಿ-ಅಂಶ ವಿವರಿಸಿದೆ.
ಪಶ್ಚಿಮಬಂಗಾಳ, ಒಡಿಶಾ ಮತ್ತು ಅಸ್ಸಾಂನಲ್ಲಿ ಕೋವಿಡ್ ಸೋಂಕು ಪ್ರಕರಣದಲ್ಲಿ ಹೆಚ್ಚಳ ಕಂಡಿದೆ. ಇದಕ್ಕೂ ಮೊದಲು ಮಹಾರಾಷ್ಟ್ರ, ದೆಹಲಿಯಲ್ಲೂ ಕೋವಿಡ್ ಪ್ರಕರಣ ಏರಿಕೆಯಾಗಿದ್ದು, ಕಳೆದ ವಾರಾಂತ್ಯದಲ್ಲಿ ಇಳಿಕೆಯಾಗಿರುವುದಾಗಿ ವರದಿ ತಿಳಿಸಿದೆ.