ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 7,584 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,05,106ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಜೂನ್ 10) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಪ್ರೀತಿ ನಿರಾಕರಿಸಿದ್ದಕ್ಕೆ ನಡುರಸ್ತೆಯಲ್ಲೇ ಯುವತಿಗೆ ಮಾರಣಾಂತಿಕ ಹಲ್ಲೆ
ಒಂದೇ ದಿನದಲ್ಲಿ ಕೋವಿಡ್ ನಿಂದ 24ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,747ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.
ಭಾರತದಲ್ಲಿ 24ಗಂಟೆಯಲ್ಲಿ 3,791 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಂದೇ ದಿನ 3,769 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ದೇಶದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.70ರಷ್ಟಿದೆ.
ಪ್ರತಿದಿನದ ಪಾಸಿಟಿವಿಟಿ ದರ ಶೇ.2.26ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.1.50ರಷ್ಟಿದೆ. ಕೋವಿಡ್ 19 ಸೋಂಕಿನಿಂದ ದೇಶಾದ್ಯಂತ ಈವರೆಗೆ ಒಟ್ಟು 4,26,44,092 ಮಂದಿ ಗುಣಮುಖರಾಗಿದ್ದಾರೆ ಎಂದು ಅಂಕಿಅಂಶ ವಿವರಿಸಿದೆ.