Advertisement

ಭಾರತದಲ್ಲಿ 24ಗಂಟೆಯಲ್ಲಿ 2,364 ಕೋವಿಡ್ ಸೋಂಕು ಪ್ರಕರಣ ದೃಢ, ಹತ್ತು ಮಂದಿ ಸಾವು

12:33 PM May 19, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,364 ನೂತನ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,29,563ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಮೇ 19) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಔರಂಗಜೇಬ್ ಸಮಾಧಿಗೆ 5 ದಿನಗಳ ಕಾಲ ಪ್ರವೇಶವಿಲ್ಲ: ಅಜಿತ್ ಪವಾರ್

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 15,419ಕ್ಕೆ ಇಳಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ 19 ಸೋಂಕಿನಿಂದ 10 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,303ಕ್ಕೆ ಏರಿಕೆಯಾಗಿದೆ.

ಕೋವಿಡ್ 19 ಚೇತರಿಕೆ ದರ ಶೇ.98.75ರಷ್ಟಿದೆ. ಒಂದೇ ದಿನದಲ್ಲಿ 228 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.50ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.0.55ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,25,89,841ಕ್ಕೆ ಏರಿಕೆಯಾಗಿದೆ. ದೇಶಾದ್ಯಂತದ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ 191.79 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next