ಬೆಂಗಳೂರು:ಕೋವಿಡ್ 19 ವೈರಸ್ ಸೋಂಕು ಹರಡದಂತೆ ತಡೆಯಲು ರಾಜ್ಯದ ಕಾರಾಗೃಹಗಳಲ್ಲಿ ಕೈಗೊಳ್ಳಲಾದ ಕ್ರಮಗಳು, ಅಲ್ಲಿನ ದಟ್ಟನೆ ಬಗ್ಗೆ ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ನಡೆಸಿದ ಮುಖ್ಯ ನ್ಯಾಣ ಎ.ಎಸ್. ಓಕ್ ಹಾಗೂ ನ್ಯಾಣ ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ಜತೆಗೆ ರಿಮ್ಯಾಂಡ್ ಹೋಂಗಳಲ್ಲಿ ಕೋವಿಡ್ 19 ಹರಡದಂತೆ ತಡೆಯಲು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಪಾಲಿಸಿದ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತು.
ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮಾಹಿತಿಯಂತೆ ಲಾಕ್‌ಡೌನ್ ಘೋಷಣೆಯಾದ ದಿನದಿಂದ ಇಲ್ಲಿವರೆಗೆ ರಾಜ್ಯದ ವಿವಿಧ ಜೈಲುಗಳಲ್ಲಿನ 707 ವಿಚಾರಣಾಧೀನ ಕೈದಿಗಳಿಗೆ ಜಾಮೀನು ನೀಡಲಾಗಿದೆ. ಅದೇ ರೀತಿ 405 ಕೈದಿಗಳಿಗೆ ಪೆರೋಲ್ ನೀಡಲಾಗಿದೆ
ಎಂದು ಸರಕಾರದ ಪರ ವಕೀಲರು ಮಾಹಿತಿ ನೀಡಿದ್ದಾರೆ. ಮುಂದಿನ ವಿಚಾರಣೆಯನ್ನು ಎ.21ಕ್ಕೆ ನಿಗದಿಪಡಿಸಲಾಗಿದೆ.