Advertisement

ಹೋಮ್ ಕ್ವಾರೆಂಟೈನ್ ನಲ್ಲಿರುವವರು ಮನೆಯಿಂದ ಹೊರಗೆ ಬಂದ್ರೆ ಹೀಗೆ ಮಾಡಿ ; ಉಡುಪಿ ಡಿ.ಸಿ. ಸಲಹೆ

10:46 AM Mar 27, 2020 | Hari Prasad |

ಉಡುಪಿ: ಕೋವಿಡ್ 19 ವೈರಸ್ ಹರಡುವುದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಲಾಕ್ ಡೌನ್ ಸಹಿತ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿರುವ ನಡುವೆಯೇ ಜಿಲ್ಲಾಡಳಿತವೂ ಸಹ ಆಯಾಯ ಜಿಲ್ಲೆಯಲ್ಲಿರುವ ಹೋಮ್ ಕ್ವಾರೆಂಟೈನ್ ವ್ಯಕ್ತಿಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಹಲವಾರು ಕ್ರಮಗಳನ್ನು ಕೈಗೊಂಡಿದೆ.

Advertisement

ಉಡುಪಿ ಜಿಲ್ಲೆಯಲ್ಲಿ ಇತ್ತೀಚಿಗೆ ಒಂದು ಸಾವಿರಕ್ಕೂ ಹೆಚ್ಚು ಜನ ವಿದೇಶಗಳಿಂದ ಆಗಮಿಸಿದ್ದಾರೆ. ಮತ್ತು ಅವರೆಲ್ಲರನ್ನು ಗುರುತಿಸಿ ಈಗಾಗಲೇ ಹೋಮ್ ಕ್ವಾರೆಂಟೈನ್ ನಲ್ಲಿ ಇಡಲಾಗಿದೆ. ಇಂತವರು ತಮ್ಮ ಮನೆಗಳಿಂದ ಹೊರಗೆ ಬರದಂತೆ ಗಮನಿಸುವಲ್ಲಿ ಇದೀಗ ಜಿಲ್ಲಾಧಿಕಾರಿಯವರು ಸಾರ್ವಜನಿಕರ ಸಹಕಾರವನ್ನು ಕೋರಿದ್ದಾರೆ. ಹೋಮ್ ಕ್ವಾರೆಂಟೈನ್ ನಲ್ಲಿರುವ ವ್ಯಕ್ತಿಗಳ ಮನೆಯ ಆಸುಪಾಸಿನಲ್ಲಿರುವವರು ಈ ವ್ಯಕ್ತಿಗಳು ಒಂದುವೇಳೆ ಮನೆಯಿಂದ ಹೊರ ಬಂದಲ್ಲಿ ಆ ಕುರಿತಾಗಿ ತಕ್ಷಣವೇ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಜಗದೀಶ್ ಅವರು ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.

ಆರೋಗ್ಯ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸ್ಥಳೀಯಾಡಳಿತ ಸಂಪೂರ್ಣವಾಗಿ ಈ ಕುರಿತಾಗಿ ನಿಗಾ ವಹಿಸುವ ಕೆಲಸದಲ್ಲಿ ನಿರತವಾಗಿದೆ. ಇವರೆಲ್ಲರ ಜೊತೆ ಸಾರ್ವಜನಿಕರು ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿಯವರು ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಹಾಗೆಯೇ, ಹೋಮ್ ಕ್ವಾರೆಂಟೈನ್ ಆಗಿರುವ ವ್ಯಕ್ತಿಗಳಿಗೆ ಜಿಲ್ಲಾಧಿಕಾರಿ ಕಛೇರಿಯಿಂದಲೇ ಫೋನ್ ಕರೆ ಮಾಡಿ ವಿಚಾರಿಸುವ ಕೆಲಸವೂ ನಡೆಯುತ್ತಿದೆ. ಹಾಗೆಯೇ ಹೋಮ್ ಕ್ವಾರೆಂಟೈನ್ ನಲ್ಲಿರುವ ವ್ಯಕ್ತಿಗಳು ತಮ್ಮ ಮನೆಗಳಿಂದ ಯಾವುದೇ ಕಾರಣಕ್ಕೆ ಹೊರಗೆ ಬರಬಾರದು ಹಾಗೆ ಹೊರಗೆ ಬಂದ ಮಾಹಿತಿ ಸಿಕ್ಕಿದಲ್ಲಿ ಅಂತಹ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next