Advertisement

ಕೋವಿಡ್‌ 19 ಆಸ್ಪತ್ರೆ: ಸ್ವಚ್ಛತೆಗೆ ಆದ್ಯತೆ ನೀಡಿ

07:04 AM Jun 30, 2020 | Lakshmi GovindaRaj |

ಹಾಸನ: ಜಿಲ್ಲೆಯ ಕೋವಿಡ್‌ 19 ಆಸ್ಪತ್ರೆ ಹಾಗೂ ಎಲ್ಲ ಕ್ವಾರಂಟೈನ್‌ ಕೇಂದ್ರಗಳ ಮೂಲಭೂತ ಸೌಕರ್ಯ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಜಿಲ್ಲಾಧಿಕಾರಿಗೆ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಯಲ್ಲಿ ಮಾತನಾಡಿದ ಅವರು, ಕೋವಿಡ್‌ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಸನದ ಕೋವಿಡ್‌ 19 ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ  ಹಾಸಿಗೆಗಳ ವ್ಯವಸ್ಥೆ ಮಾಡುವುದರ ಜೊತೆಗೆ 200 ಬೆಡ್‌ಗಳ ಪ್ರತ್ಯೇಕ ಆಸ್ಪತ್ರೆಯನ್ನು ಸಿದ್ಧಪಡಿಸಿಟ್ಟುಕೊಳ್ಳಿ ಎಂದು ಸೂಚನೆ ನೀಡಿದರು.

ಕೋವಿಡ್‌ 19 ಪರೀಕ್ಷೆ ನಡೆಸಿ: ಕ್ಷೌರಿಕರು, ಕೊಳಗೇರಿ ವಾಸಿಗಳು, ಕೂಲಿ ಕಾರ್ಮಿಕರು, ಬಡವರನ್ನು ಪತ್ತೆ ಮಾಡಿ ಅವರು ಆರೋಗ್ಯ ಸುರಕ್ಷತೆಗಾಗಿ ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಿ ಎಂದು ಸಚಿವರು ನಿರ್ದೇಶನ ನೀಡಿದರು.

ಸಭೆಯಲ್ಲಿ ಹಾಜರಿದ್ದ ಶಾಸಕರಾದ ಎಚ್‌.ಕೆ. ಕುಮಾರಸ್ವಾಮಿ, ಸಿ.ಎನ್‌ ಬಾಲಕೃಷ್ಣ, ಹಾಗೂ ವಿಧಾನ ಪರಿಷತ್‌ ಸದಸ್ಯ ಎಂ.ಎ. ಗೋಪಾಲಸ್ವಾಮಿ ಮಾತನಾಡಿ, ಹೊರ ರಾಜ್ಯದಿಂದ ಬಂದವರಲ್ಲಿ ಸೋಂಕು ಹೆಚ್ಚಾಗಿ ಕಂಡು  ಬರುತ್ತಿರುವುದರಿಂದ ಆಸ್ಪತ್ರೆಯ ಸೌಲಭ್ಯಗಳನ್ನು ಹೆಚ್ಚಿಸಬೇಕು ಹಾಗೂ ಪ್ರತಿ ತಾಲೂಕಿಗೂ ಹೆಚ್ಚುವರಿ ವೆಂಟಿಲೇಟರ್‌ ಗಳನ್ನು ಪೂರೈಸುವಂತೆ ಸಚಿವರಲ್ಲಿ ಮನವಿ ಮಾಡಿದರು.

ಜಿಲ್ಲಾ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳ ಹಾಗೂ ತಾಲೂಕು ಮುಖ್ಯ ರಸ್ತೆಗಳಲ್ಲಿ ಭಾರಿ ತೂಕದ ವಾಹನಗಳು ಸಂಚರಿಸುತ್ತಿದ್ದು, ಮಳಗಾಲದಲ್ಲಿ ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿ ಜನರಿಗೆ ತೊಂದರೆಯಾಗುತ್ತದೆ ಹಾಗಾಗಿ ಅಂತಹ  ವಾಹನಗಳ ಸಂಚಾರ ನಿಯಂತ್ರಿಸಬೇಕು ಎಂದು ಶಾಸಕ ಬಾಲಕೃಷ್ಣ ಅವರು ಒತ್ತಾಯಿಸಿದರು.

Advertisement

ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ಎಚ್‌.ಕೆ. ಕುಮಾರಸ್ವಾಮಿ ಮಾತನಾಡಿ, ಸಕಲೇಶಪುರ – ಹಾಸನ ನಡುವಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ವಿಳಂಬವಾಗುತ್ತಿದೆ. ಕಳಪೆ ಗುಣಮಟ್ಟ ಹಾಗೂ ಅಧಿಕಾರಿಗಳ  ನಿರ್ಲಕ್ಷ್ಯದ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕಾಡಾನೆ ಹಾವಳಿ ಶಾಶ್ವತ ನಿಯಂತ್ರಣಕ್ಕೆ ಯೋಜನೆ ರೂಪಿಸ ಬೇಕು ಎಂದು ಮನವಿ ಮಾಡಿದರು. ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು ಜಿಲ್ಲೆ ಯಲ್ಲಿನ ಕೋವಿಡ್‌ 19 ತಡೆಗಟ್ಟಲು  ಕೈಗೊಂಡಿ ರುವ ಕ್ರಮಗಳು ಮತ್ತು ಜಿಲ್ಲೆಯಲ್ಲಿನ ಸ್ಥಿತಿಗತಿಯ ಕುರಿತು ಸಚಿವರಿಗೆ ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸ್‌ ಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು, ಜಿಲ್ಲಾ ಪಂಚಾಯತ್‌ ಸಿಇಒ ಬಿ.ಎ. ಪರಮೇಶ್‌, ಉಪ ಭಾಗಾಧಿಕಾರಿ ಗಿರೀಶ್‌ ನಂದನ್‌, ಡಿಎಚ್‌ಒ ಡಾ. ಸತೀಶ್‌ಕುಮಾರ್‌, ಹಿಮ್ಸ್‌  ನಿರ್ದೇಶಕ ಡಾ.ಬಿ.ಸಿ.ರಕುಮಾರ್‌, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕೃಷ್ಣಮೂರ್ತಿ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಕೊಬ್ಬರಿ ಖರೀದಿ ಬಗ್ಗೆ ಮಾಹಿತಿ ನೀಡಿ: ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು. ನೋಂದಣಿ ಯನ್ನು ಶೀಘ್ರವಾಗಿ ಪೂರ್ಣಗೊಳಿಸ ಬೇಕು. ಆಲೂಗಡ್ಡೆ ಬೆಳೆಹಾನಿ ಪರಿಹಾರ  ಒದಗಿಸುವ ಬಗ್ಗೆ ಈಗಾಗಲೇ ತೋಟ ಗಾರಿಕೆ ಸಚಿವರೊಂದಿಗೆ ಸಭೆ ನಡೆಸ ಲಾಗಿದೆ ಶೀಘ್ರವಾಗಿ ಮುಖ್ಯಮಂತ್ರಿಯ ವರನ್ನು ಭೇಟಿ ಮಾಡಿ ಚರ್ಚಿಸಲಾಗು ವುದು ಎಂದು ಸಚಿವ ಗೋಪಾಲಯ್ಯ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next