ನವದೆಹಲಿ: ಮಧ್ಯಪ್ರದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 15ರಿಂದ 31ರವರೆಗೆ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆ (1ರಿಂದ 12ನೇ ತರಗತಿ)ಗಳನ್ನು ಬಂದ್ ಮಾಡುವಂತೆ ಶುಕ್ರವಾರ (ಜನವರಿ 14) ಘೋಷಿಸಿದೆ.
ಇದನ್ನೂ ಓದಿ:ಸಂತ್ರಸ್ತೆಯ ತಾಯಿಗೆ ಟಿಕೆಟ್: ಇದೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವ್ಯತ್ಯಾಸ;ಗುಂಡೂರಾವ್
ರಾಜಕೀಯ ಸಮಾವೇಶ, ಧಾರ್ಮಿಕ ಸಮಾರಂಭಕ್ಕೆ ಅವಕಾಶ ಇಲ್ಲ ಎಂದು ತಿಳಿಸಿರುವ ಮಧ್ಯಪ್ರದೇಶ ಸರ್ಕಾರ, ರಾಜ್ಯದಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ ಎಂದು ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಶುಕ್ರವಾರ 4,031 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 17,652ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶ ತಿಳಿಸಿದೆ.
ಮಧ್ಯಪ್ರದೇಶದಲ್ಲಿ ಶೇ.5.1ರಷ್ಟು ಪಾಸಿಟಿವಿಟಿ ದರ ಇದ್ದು, ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 3,639ಕ್ಕೆ ಹೆಚ್ಚಳವಾಗಿದೆ. 24ಗಂಟೆಯಲ್ಲಿ 782 ಮಂದಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದು, ಒಟ್ಟು 7,86,278 ಮಂದಿ ಗುಣಮುಖರಾಗಿದ್ದಾರೆ.