Advertisement

ಭಾರತದಲ್ಲಿ 2,68,833 ಕೋವಿಡ್ ಪ್ರಕರಣಗಳು ಪತ್ತೆ, ಒಮಿಕ್ರಾನ್ ಸಂಖ್ಯೆ 6,041ಕ್ಕೆ ಏರಿಕೆ

10:24 AM Jan 15, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,68,833 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಕೋವಿಡ್ 19 ಸೋಂಕಿನಿಂದ 402 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,85,752ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಜನವರಿ 15) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

24ಗಂಟೆ ಅವಧಿಯಲ್ಲಿ 1,45,747 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 14,17,820ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ 1,22,684 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಒಟ್ಟು 3,49,47,390 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಶುಕ್ರವಾರಕ್ಕಿಂತ ಶೇ.5.1ರಷ್ಟು ಕೋವಿಡ್ ಪ್ರಕರಣಗಳು ಹೆಚ್ಚಳವಾಗಿದೆ ಎಂದು ಅಂಕಿಅಂಶ ವಿವರಿಸಿದೆ.

24ಗಂಟೆಯಲ್ಲಿ ಭಾರತದಲ್ಲಿ 288 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 6,041ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿದ ಅಂಕಿಅಂಶದಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next