ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 30,256 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 295 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,34,78,419ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಸೆಪ್ಟೆಂಬರ್ 20) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಜಾಲತಾಣದಲ್ಲಿ ಓಡಾಡುತ್ತಿರುವ ನಕಲಿ ವಿಡಿಯೊ ನನ್ನದಲ್ಲ: ಸದಾನಂದ ಗೌಡ
ದೇಶದಲ್ಲಿ ಕೋವಿಡ್ ನಿಂದ ಈವರೆಗೆ 4,45,133 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು 30,256 ಕೋವಿಡ್ ಪ್ರಕರಣ ಪತ್ತೆಯಾಗಿದ್ದರೆ, ಕೇರಳದಲ್ಲಿ 19,653 ಪ್ರಕರಣ ವರದಿಯಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಲಾಗಿದೆ.
ಕಳೆದ 24ಗಂಟೆಗಳಲ್ಲಿ ಕೇರಳದಲ್ಲಿ ಕೋವಿಡ್ ನಿಂದ 152 ಮಂದಿ ಸಾವನ್ನಪ್ಪಿದ್ದು, ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 45,08,493ಕ್ಕೆ ಏರಿಕೆಯಾಗಿದೆ. ಕೇರಳದಾದ್ಯಂತ ಕೋವಿಡ್ ನಿಂದ ಈವರೆಗೆ 23,591 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
24 ಗಂಟೆಗಳಲ್ಲಿ 26,711 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ದೇಶಾದ್ಯಂತ ಒಟ್ಟು 43,10,676 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,73,631ಕ್ಕೆ ತಲುಪಿರುವುದಾಗಿ ವರದಿ ಹೇಳಿದೆ.