ನವದೆಹಲಿ: ಭಾರತದಲ್ಲಿ ಕೋವಿಡ್ ಎರಡನೇ ಅಲೆ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 42,640 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದು ಕಳೆದ 90 ದಿನಗಳ ಬಳಿಕ ದಾಖಲಾದ ಅತೀ ಕಡಿಮೆ ಪ್ರಮಾಣದ ಪ್ರಕರಣವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಜೂನ್ 22) ಬಿಡುಗಡೆಗೊಳಿಸಿದ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಭಾರೀ ವೈರಲ್ ಆಗುತ್ತಿದೆ ಮಹೇಂದ್ರ ಸಿಂಗ್ ಧೋನಿಯ ನ್ಯೂ ಲುಕ್
90 ದಿನಗಳ ಬಳಿಕ ದೇಶದಲ್ಲಿ 50 ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 6.24 ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಹೇಳಿದೆ.
ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದ ವಾರದ ಪಾಸಿಟಿವಿಟಿ ದರ ಪ್ರಸ್ತುತ ಶೇ.3.21ಕ್ಕೆ ಇಳಿಕೆಯಾಗಿದ್ದು, ದಿನದ ಪಾಸಿಟಿವಿಟಿ ದರ ಶೇ.2.56ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,167 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 81,839 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಭಾರತದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 2.99 ಕೋಟಿಗೆ ಏರಿಕೆಯಾಗಿದೆ. ಈವರೆಗೆ ಕೋವಿಡ್ ನಿಂದ 3,89,302 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ 2.89 ಕೋಟಿ ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿರುವುದಾಗಿ ಅಂಕಿಅಂಶ ತಿಳಿಸಿದೆ.