ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,797 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಕಳೆದ 122 ದಿನಗಳ ನಂತರ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 30 ಸಾವಿರಕ್ಕಿಂತ ಕೆಳಕ್ಕಿಳಿದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಅಕ್ಟೋಬರ್ 08) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕೊಡಗಿನಲ್ಲಿ ಹುಲಿ ದಾಳಿ ; ಎರಡು ಎಮ್ಮೆಗಳ ಸಾವು, ಜೀವಭಯದಲ್ಲಿ ಗ್ರಾಮಸ್ಥರು
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಅಂಕಿಅಂಶದ ಪ್ರಕಾರ, ದೇಶದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಒಟ್ಟು 4,40,51,228 ಮಂದಿ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.75ರಷ್ಟಿದೆ.
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 29,251ಕ್ಕೆ ಇಳಿಕೆಯಾಗಿದೆ. ಶನಿವಾರ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 30,362ರಷ್ಟಿತ್ತು ಎಂದು ಅಂಕಿ-ಅಂಶ ತಿಳಿಸಿದೆ.
ಕಳೆದ 24ಗಂಟೆಯಲ್ಲಿ ದೇಶದಲ್ಲಿ 1,111 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಭಾರತದಲ್ಲಿ ಕೋವಿಡ್ ಸೋಂಕಿನಿಂದ ಈವರೆಗೆ ಒಟ್ಟು 5,28,778 ಮಂದಿ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.