Advertisement

ಭಾರತದಲ್ಲಿ 24 ಗಂಟೆಯಲ್ಲಿ 6,093 ಕೋವಿಡ್ ಸೋಂಕು ಪ್ರಕರಣ ಪತ್ತೆ, 33 ಮಂದಿ ಸಾವು

10:25 AM Sep 09, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 6093 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 33 ಮಂದಿ ಕೋವಿಡ್ ನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಸೆ.09) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ದೇವರ ದರ್ಶನಕ್ಕೆ ಫ್ಯಾನ್ಸ್‌ ರೆಡಿ: ಲಕ್ಕಿಮ್ಯಾನ್ ವಿಶೇಷ ಪಾತ್ರದಲ್ಲಿ ಪುನೀತ್‌ ರಾಜ್‌ಕುಮಾರ್

ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.70ರಷ್ಟಿದೆ. ಈವರೆಗೆ ದೇಶಾದ್ಯಂತ ಕೋವಿಡ್ 19 ಸೋಂಕು ಪ್ರಕರಣದಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,39,06,972 ಕೋಟಿಗೆ ಏರಿಕೆಯಾಗಿದೆ.

ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 49,636ಕ್ಕೆ ಇಳಿಕೆಯಾಗಿದೆ. ಗುರುವಾರ ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 50,342ರಷ್ಟಿತ್ತು ಎಂದು ಸಚಿವಾಲಯ ತಿಳಿಸಿದೆ. ಒಂದೇ ದಿನದಲ್ಲಿ 706 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next