ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 7,219 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಈವರೆಗೆ ಕೋವಿಡ್ ನಿಂದ ಒಟ್ಟು 4,38,65,016 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಸೆಪ್ಟೆಂಬರ್ 03) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ವಂಚಕ ಸುಕೇಶ್ ಚಂದ್ರಶೇಖರ್ ಕೇಸ್: ನಟಿ ನೋರಾ ಫತೇಹಿ ವಿಚಾರಣೆ ನಡೆಸಿದ ಪೊಲೀಸರು
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 56,745ಕ್ಕೆ ಇಳಿಕೆಯಾಗಿದೆ. ಶುಕ್ರವಾರ ಭಾರತದಲ್ಲಿ 59,210 ಸಕ್ರಿಯ ಕೋವಿಡ್ ಪ್ರಕರಣಗಳು ದಾಖಲಾಗಿತ್ತು ಎಂದು ಅಂಕಿಅಂಶ ವಿವರಿಸಿದೆ.
ಒಂದೇ ದಿನದಲ್ಲಿ 2,465 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. 24ಗಂಟೆಯಲ್ಲಿ ದೇಶದಲ್ಲಿ ಕೋವಿಡ್ ನಿಂದ 33 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,27,965ಕ್ಕೆ ತಲುಪಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,44,49,726 ಕೋಟಿಗೆ ಏರಿಕೆಯಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.1.98ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.