Advertisement

238 ದಿನಗಳ ನಂತರ ಮತ್ತಷ್ಟು ಇಳಿಕೆ; ಭಾರತದಲ್ಲಿ 12,428 ಕೋವಿಡ್ ಪ್ರಕರಣ ಪತ್ತೆ

10:32 AM Oct 26, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 12,428 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದು ಕಳೆದ 238 ದಿನಗಳ ನಂತರದ ಕನಿಷ್ಠ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಅಕ್ಟೋಬರ್ 26) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:2019ರಲ್ಲಿ ದಾಳಿಯಾಗಿದ್ದ ಪುಲ್ವಾಮಾ ಸಿಆರ್ ಪಿಎಫ್ ಕ್ಯಾಂಪಸ್ ನಲ್ಲಿ ರಾತ್ರಿ ಕಳೆದ ಅಮಿತ್ ಶಾ

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,63,816ಕ್ಕೆ ಇಳಿಕೆಯಾಗಿದ್ದು, ಇದು 241 ದಿನಗಳ ಕನಿಷ್ಠ ಸಂಖ್ಯೆಯಾಗಿದೆ. ಸತತ 31 ದಿನಗಳಿಂದ ದಿನಂಪ್ರತಿ 30,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ವರದಿಯಾಗುತ್ತಿದೆ ಎಂದು ವರದಿ ಹೇಳಿದೆ.

ಕಳೆದ 24ಗಂಟೆಗಳಲ್ಲಿ 356 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಅಲ್ಲದೇ 15,951 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ. ಕೇರಳದಲ್ಲಿ ಅತೀ ಹೆಚ್ಚು ಪ್ರಕರಣಗಳಿದ್ದು, ಕಳೆದ 24ಗಂಟೆಗಳಲ್ಲಿ 6,664 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 53 ಸಾವು ಸಂಭವಿಸಿದೆ.

ಸೋಮವಾರ 11ಲಕ್ಷಕ್ಕಿಂತಲೂ ಅಧಿಕ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ ಒಟ್ಟು ದೇಶದಲ್ಲಿ 60,19,01,543 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ದಿನದ ಪಾಸಿಟಿವಿಟಿ ದರ ಶೇ.1.10ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.1.24ರಷ್ಟಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next