Advertisement

ಒಂದೇ ಕುಟುಂಬದ ಹತ್ತು ಜನರಿಗೆ ಕೋವಿಡ್-19 ಸೋಂಕು !

01:20 PM Apr 17, 2020 | keerthan |

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದಲ್ಲಿ ಈಗಾಗಲೇ ಒಂದೇ ಕುಟುಂಬದ ಮೂವರಲ್ಲಿ ಪತ್ತೆಯಾಗಿದ್ದ ಕೋವಿಡ್-19 ವೈರಸ್ ಪಾಸಿಟಿವ್ ಇದೀಗ ಅದೇ ಕುಟುಂಬದ ಮತ್ತೆ ಏಳು ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದಾರೆ.

Advertisement

ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಎಸ್.ಆರ್.ನಗರದಲ್ಲಿನ ಒಂದೇ ಕುಟುಂಬದ ಮೂವರಲ್ಲಿ ಮಾರ್ಚ್ 30 ರಂದು ಕೋವಿಡ್-19 ವೈರಸ್ ಇರುವುದು ದೃಢಪಟ್ಟಿತ್ತು‌. ನಂತರ ಏ.4 ರಂದು ಇದೇ ಕುಟುಂಬದೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯೊಬ್ಬರಿಗೂ ವೈರಾಣು ಪತ್ತೆಯಾಗಿತ್ತು. ಇವರ ಸಂಬಂಧಿಕರಾದ 8 ಜನರನ್ನು ಹೊಸಪೇಟೆ ನಗರದ ಖಾಸಗಿ ಹೊಟೇಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಈ ಎಂಟು ಜನರ ಪೈಕಿ ಏಳು ಜನರಿಗೆ ಸೋಂಕು ಪಾಸಿಟಿವ್ ಇರುವುದು ಪತ್ತೆಯಾಗಿದ್ದು, ರಾಜ್ಯ ಸರ್ಕಾರ ಪ್ರಕಟಿಸಿದ ಶುಕ್ರವಾರದ ಬೆಳಗಿನ ಹೆಲ್ತ್ ಬುಲೆಟಿನ್ ಅಧಿಕೃತ ಪಡಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 13ಕ್ಕೆ ಏರಿಕೆಯಾದಂತಾಗಿದ್ದು,ಹೊಸಪೇಟೆ ನಗರದಲ್ಲೇ 11 ಜನರಿಗೆ ಕೋವಿಡ್-19 ಸೋಂಕು ತಗುಲಿದಂತಾಗಲಿದೆ.

ಹೊಸಪೇಟೆ ಎಸ್.ಆರ್.ನಗರದ ಒಂದೇ ಕುಟುಂಬದ ನಾಲ್ವರಿಗೆ ಈ ಸೋಂಕು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಅದೇ ಕುಟುಂಬದ ಪ್ರಾಥಮಿಕ  ಕಾಂಟ್ಯಾಕ್ಟ್ ಹೊಂದಿದ್ದ 25 ಮಂದಿಯನ್ನೂ ಸೇರಿದಂತೆ ಅಂದಾಜು 125 ಮಂದಿಯನ್ನ ಕಳೆದ ಹದಿನಾಲ್ಕು ದಿನಗಳಕಾಲ ಜಿಲ್ಲಾಡಳಿತ ಹೊಸಪೇಟೆ ಹೊಟೇಲ್ ವೊಂದರಲ್ಲಿ ಕ್ವಾರೈಂಟೀನ್ ಮಾಡಲಾಗಿತ್ತು.  ಹನ್ನೆರಡನೇಯ ದಿನಕ್ಕೆ ಟೆಸ್ಟ್ ಮಾಡಿದಾಗ ಏಳು ಮಂದಿಯಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಅಲ್ಲದೇ, ಹೊಸಪೇಟೆ ಎಸ್.ಆರ್.ನಗರದ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಕ್ರಮ ಸಂಖ್ಯೆ 89, 90, 91 ರೋಗಿಗಳನ್ನ ಜಿಲ್ಲಾಸ್ಪತ್ರೆಯ ಕೋವಿಡ್ – 19 ಐಶೋಲೇಷನ್ ವಾರ್ಡಿನಲ್ಲಿ ಇರಿಸಲಾಗಿದ್ದು, ಅವರೊಂದಿಗೆ ಹೊಂದಿರೊ ಪ್ರೈಮರಿ ಕಾಂಟ್ಯಾಕ್ಟ್ ಹೊಂದಿರೊ ಏಳು ಮಂದಿಯಲ್ಲಿ ವೈರಾಣು ಸೋಂಕು ಪತ್ತೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next