Advertisement

ಕೋವಿಡ್ 19 ಪರಿಸ್ಥಿತಿ ನಿರ್ವಹಣೆಗೆ ಮಾಹಿತಿ ಸಂಗ್ರಣೆ

01:34 PM Apr 07, 2020 | Suhan S |

ಬೆಂಗಳೂರು: ರಾಜ್ಯದಲ್ಲಿ  ಕೋವಿಡ್ 19 ಪ್ರಕರಣಗಳ ಏರಿಕೆ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ. ಸುಧಾಕರ್‌ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಸಂಗ್ರಹಿಸಿದರು. ಈ ಕುರಿತು ಅಧಿಕಾರಿಗಳ ಜತೆ ಸರಣಿ ಸಭೆ ನಡೆಸಿದರು.

Advertisement

ಸೋಮವಾರ ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಆಸ್ಪತ್ರೆಯ ಸನ್ನದ್ಧತೆಯ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ 750 ಹಾಸಿಗೆಗಳನ್ನು ಕೋವಿಡ್ 19  ವೈರಸ್‌ ಸೋಂಕಿತರಿಗಾಗಿ ಮೀಸಲಿಡ ಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಯೋಗ ಕ್ಷೇಮ ವಿಚಾರಣೆ ನಡೆಸಿದರು. ಮುಂಜಾಗ್ರತಾ ಪರಿಕರಗಳ ಲಭ್ಯತೆ ಕುರಿತು ಅಧಿಕಾರಿ ಹಾಗೂ ಆಡಳಿತ ವರ್ಗದವರೊಂದಿಗೆ ಚರ್ಚೆ ನಡೆಸಿದರು. ಬಳಿಕ ವಿಧಾನಸೌಧದಲ್ಲಿ ರಾಜ್ಯದ ವಿವಿಧ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಕೋವಿಡ್ 19  ಸೋಂಕಿತರ ಚಿಕಿತ್ಸೆಗೆ ಅಗತ್ಯ ಸೌಲಭ್ಯಗಳು ಮತ್ತು ಔಷಧಿಗಳ ಲಭ್ಯತೆ, ಲ್ಯಾಬ್‌ ಅನುಕೂಲ ಸೇರಿದಂತೆ ಅಗತ್ಯ ವಿಚಾರಗಳ ಕುರಿತು ಚರ್ಚೆ ನಡೆಸಿದರು.

ಸಭೆಯಲ್ಲಿ ರಾಜೀವ ಗಾಂಧಿ ಆರೋಗ್ಯ ಸಂಸ್ಥೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವಾಲಯದ ನಿರ್ದೇಶಕರು, ವೈದ್ಯ ಕೀಯ ಕಾಲೇಜುಗಳ ನಿರ್ದೇಶಕರುಗಳು ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next