Advertisement

ಕೋವಿಡ್ 19 ತಡೆಗೆ ಮುನ್ನೆಚ್ಚರಿಕೆ ಅಗತ್ಯ

03:39 PM Mar 22, 2020 | Suhan S |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್ 19 ವೈರಸ್‌ ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೂ ಭೇಟಿ ನೀಡಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್‌ ಸೂಚಿಸಿದರು.

Advertisement

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಶನಿವಾರ ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟುವ ಸಲುವಾಗಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನೆರೆಯ ಆಂಧ್ರದ ಗಡಿಗೆ ಹಾಗೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರ ಇರುವ ಜಿಲ್ಲೆಯಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದರು. ಅಂತರ ಕಾಯ್ದುಕೊಳ್ಳಿ: ಕೊರೊನಾ ವೈರಸ್‌ ಹರಡುವಿಕೆ ದಿನೇ ದಿನೆ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದರು.

ಸ್ಯಾನಿಟೈಸರ್‌ ಒದಗಿಸಿ: ಕೋವಿಡ್ 19  ಜಾಗೃತಿಗೆ ಎನ್‌ಸಿಸಿ ಹಾಗೂ ಸ್ಕೌಟ್ಸ್‌ ಅಂಡ್‌ ಗೈಡ್‌ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವಂತೆ ಸೂಚಿಸಿದರು. ಗೌರಿಬಿದನೂರು ತಾಲೂಕಿನ ಅಲ್ಲೀಪುರದಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ತಿಳಿಸಿದರು. ಡೀಸಿ ಆರ್‌.ಲತಾ ಮಾತನಾಡಿ, ಇಲ್ಲಿಯವ ರೆಗೆ 129 ಜನ ವಿದೇಶಗಳಿಂದ ಜಿಲ್ಲೆಗೆ ಬಂದಿದ್ದು, 34 ಮಂದಿ ಚಿಕ್ಕಬಳ್ಳಾಪುರ, 68 ಮಂದಿ ಗೌರಿಬಿದನೂರು, 6 ಮಂದಿ ಬಾಗೇ ಪಲ್ಲಿ, 12 ಮಂದಿ ಶಿಡ್ಲಘಟ್ಟ ತಾಲೂಕಿನವ ರಾಗಿದ್ದಾರೆ. ಇದರಲ್ಲಿ 89 ಮಂದಿಯನ್ನು 14 ದಿನಗಳ ಅವಲೋಕನದಲ್ಲಿ ಇರಿಸಲಾಗಿದೆ ಎಂದರು.

ಜಿಪಂ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ, ಉಪಾಧ್ಯಕ್ಷೆ ನಿರ್ಮಲಾ, ಜಿಲ್ಲಾಧಿಕಾರಿ ಆರ್‌. ಲತಾ, ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌, ಅಪರ ಜಿಲ್ಲಾಧಿಕಾರಿ ಆರತಿ, ಉಪ ವಿಭಾಗಾಧಿಕಾರಿ ರಘುನಂದ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯೋಗೇಶ್‌ಗೌಡ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next