ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಪತ್ತೆಯಾಗುತ್ತಿರುವ ಕೋವಿಡ್ 19 ಸೋಂಕಿತರಲ್ಲಿ ಶೇ.90 ರಷ್ಟು ಮಂದಿಗೆ ರೋಗದ ಲಕ್ಷಣಗಳೇ ಕಾಣಿಸುತ್ತಿಲ್ಲ. ಕೋವಿಡ್ 19 ನಿಯಂತ್ರಣ ಕ್ಕೆ ರಾಜ್ಯದಲ್ಲಿ ಕೊವೀಡ್ ಸೆಂಟರ್ ಮಾಡಿ ರೋಗದ ಲಕ್ಷಣ ಇಲ್ಲದವರಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ನಗರದ ರುದ್ರಭೂಮಿಯಲ್ಲಿ ಸಿಎಂ ವಿಶೇಷ ಅನುದಾನ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತಿರುವ ಚಿತಾಗಾರ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನ ದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ತೀವ್ರ ಆತಂಕ ತಂದಿದೆ ಎಂದರು.
ಮುಂಜಾಗ್ರತೆ ವಹಿಸಿ: ಸೋಂಕಿತರ ಸಂಖ್ಯೆ ಹೆಚ್ಚಾದರೂ ತೀವ್ರ ತರವಾದ ದುಷ್ಪರಿಣಾಮ ಬೀರದೆ ಇರೋದು ಸಮಾಧಾನಕರ ವಿಚಾರ. ಹಿರಿಯರು ಹಾಗೂ ಕಾಯಿಲೆ ಇರುವವರನ್ನು ಜೋಪಾನವಾಗಿ ನೋಡಿಕೊಳ್ಳಬೇಕಿದೆ. ಕುಟುಂಬಸ್ಥರು ಮುಂಜಾ ಗ್ರತ ಕ್ರಮ ವಹಿಸಿದರೆ ಕೋವಿಡ್ 19ದಿಂದ ಪಾರಾಗಬಹುದು ಎಂದರು. ಕೋವಿಡ್ 19 ನಿಯಂತ್ರಣದ ಬಗ್ಗೆ ಸರ್ಕಾರ ವಿಶೇಷ ಗಮನ ಹರಿಸುತ್ತಿದೆ. ಮೂರ್ನಾಲ್ಕು ದಿನಗಳಿ ಗೊಮ್ಮೆ ಅಧಿಕಾರಿಗಳೊಂದಿಗೆ, ತಜ್ಞರೊಂದಿಗೆ ಸಭೆ ನಡೆಸಿ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ.
ರೋಗದ ಲಕ್ಷಣಗಳು ಇರುವವರಿಗೆ ಕೋವಿಡ್-19 ಆಸ್ಪತ್ರೆ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ಮುಂದೆ ಖಾಸಗಿ ಆಸ್ಪತ್ರೆಗಳಲ್ಲೂ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು. ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ, ತಾಪಂ ಅಧ್ಯಕ್ಷ ರಾಮ ಸ್ವಾಮಿ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಒ ಬಿ. ಫೌಝೀಯಾ ತರುನ್ನುಮ, ಎಸ್ಪಿ ಮಿಥುನ್ ಕುಮಾರ್, ಮುಖಂಡರಾದ ಮರಳುಕುಂಟೆ ಕೃಷ್ಣಮೂರ್ತಿ ಇದ್ದರು.
ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಹಾಗೂ ಶಕ್ತಿ ಮೀರಿ ಕೆಲಸ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ವೈದ್ಯ ಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ನಗರದ ಲ್ಲಾಡಳಿತ ಭವನದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಗೆ ಹೆಬ್ಟಾಳ ನಾಗವಾರ ವ್ಯಾಲಿ ಯೋಜನೆಯಡಿ ಕಂದವಾರ ಕೆರೆಗೆ ನೀರು ಹರಿದಿದ್ದು, ಶೀಘ್ರವೇ ಕಂದವಾರ ಕೆರೆಯಿಂದ ಪಂಪಿಂಗ್ ಮಾಡಿ ಇತರೆ ಕೆರೆಗಳಿಗೆ ನೀರು ಹರಿಸಲಾಗುವುದು ಎಂದರು.
ಸಚಿವರಿಗೆ ಅಭಿನಂದನೆ: ಇದೇ ವೇಳೆ ಸಚಿವ ಡಾ.ಕೆ.ಸುಧಾಕರ್‌ಗೆ ಜಿಲ್ಲಾಡ ಳಿತದ ಹಿರಿಯ ಅಧಿಕಾರಿಗಳು, ಬಿಜೆಪಿ ಪಕ್ಷದ ಪ್ರಮುಖರು ಆಗಮಿಸಿ ಹೂಗುಚ್ಚ ನೀಡಿ ಶುಭ ಹಾರೈಸಿದರು. ಇದೇ ವೇಳೆ ಸಚಿವರು ಕಾರ್ಯಾಲ ಯದಲ್ಲಿ ಪುರೋಹಿತರ ಮುಖಾಂತರ ವಿಶೇಷ ಪೂಜೆ, ಹೋಮ ಮತ್ತಿತರ ಧಾರ್ಮಿಕ ಕಾರ್ಯಕ್ರಮ ನಡೆಸಿ ಕಚೇರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರ ಸಿಂಹಯ್ಯ, ತಾಪಂ ಅಧ್ಯಕ್ಷ ರಾಮಸ್ವಾಮಿ, ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಒ ಬಿ. ಫೌಜೀಯಾ ತರುನ್ನುಮ್, ಎಸ್ಪಿ ಮಿಥುನ್ ಕುಮಾರ್, ಬಿಜೆಪಿ ಮಾಜಿ ಜಿಲ್ಲಾ ಧ್ಯಕ್ಷ ಡಾ.ಜಿ.ವಿ.ಮಂಜುನಾಥ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ಮರಳುಕುಂಟೆ ಕೃಷ್ಣ ಮೂರ್ತಿ ಉಪಸ್ಥಿತರಿದ್ದರು.