ನವದೆಹಲಿ: 2018-19ರ ಸಾಲಿನ ಆದಾಯ ತೆರಿಗೆ ಸಲ್ಲಿಕೆಯ ಅಂತಿಮ ಗಡುವನ್ನು ಕೇಂದ್ರ ಸರ್ಕಾರ 2020ರ ಜೂನ್ 30ರವರೆಗೆ ವಿಸ್ತರಣೆ ಮಾಡಿರುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಘೋಷಿಸಿದ್ದಾರೆ.
ಅಷ್ಟೇ ಅಲ್ಲ ಕೋವಿಡ್ 19 ಮಹಾಮಾರಿಯಿಂದ ಸಂಭವಿಸಿದ ನಷ್ಟದ ಹಿನ್ನೆಲೆಯಲ್ಲಿ ಕೈಗಾರಿಕೆಗಳಿಗೆ ನೆರವನ್ನು ಶೀಘ್ರವೇ ಘೋಷಿಸುವುದನ್ನು ನಿರೀಕ್ಷಿಸಲಾಗಿತ್ತು.
ಏತನ್ಮಧ್ಯೆ ಆಧಾರ್ ಪಾನ್ ಕಾರ್ಡ್ ಲಿಂಕ್ ಗಡುವನ್ನು ಕೂಡಾ ಜೂನ್ 30ರವರೆಗೆ ವಿಸ್ತರಿಸಲಾಗಿದೆ. ಅಲ್ಲದೇ ಜಿಎಸ್ ಟಿ ರಿಟರ್ನ್ಸ್ ಕೂಡಾ ಮಾರ್ಚ್, ಏಪ್ರಿಲ್ ಮತ್ತು ಮೇ ಒಳಗೆ ಸಲ್ಲಿಸಬೇಕಿದ್ದು, ಅದರ ಗಡುವನ್ನು ಕೂಡಾ ಜೂನ್ 30ಕ್ಕೆ ವಿಸ್ತರಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.