Advertisement
ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದು. ಈಗಿನ ಉಪತಳಿ JN.1 ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಪತ್ತೆಯಾಗಿದ್ದು 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ 7 ಮಂದಿ ಐಸಿಯುನಲ್ಲಿದ್ದಾರೆ. ಆದರೆ ಇವರಿಗೆ ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ಐಸಿಯುನಲ್ಲಿದ್ದಾರೆ ಎಂದರು.
Related Articles
Advertisement
ಡೆಡಿಕೇಟೆಡ್ ಆಸ್ಪತ್ರೆಗಳಲ್ಲಿ ಸಕಲ ಸಿದ್ದತೆ ಇರುತ್ತವೆ. ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳಬೇಕು. ಲಸಿಕೆಗಳನ್ನು ಸಿದ್ದವಿಟ್ಟುಕೊಳ್ಳಲು ಸೂಚಿಸಲಾಗಿದೆ. ಕೇರಳದಲ್ಲಿ ಪರೀಕ್ಷೆ ಹೆಚ್ಚಿದೆ, ಆದ್ದರಿಂದ ಪ್ರಮಾಣ ಕೂಡ ಹೆಚ್ಚಿದೆ. ಇಲ್ಲಿ ಪರೀಕ್ಷೆಗಳು ಹೆಚ್ಚಾದಂತೆ ಪತ್ತೆ ಪ್ರಮಾಣವೂ ಹೆಚ್ಚಾಗಿದೆ ಎಂದರು.
ಸಾಕಷ್ಟು ಹಣ ಇದೆ. ಕೋವಿಡ್ ನಿರ್ವಹಣೆಗೆ ಹಣಕಾಸಿಗೆ ಕೊರತೆ ಇಲ್ಲ. ಪರಿಸ್ಥಿತಿ ನೋಡಿಕೊಂಡು ಮೀಸಲು ಆಸ್ಪತ್ರೆಗಳನ್ನು ನಿಗದಿ ಮಾಡುತ್ತೇವೆ. ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.