ತಿರುವನಂತಪುರ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಭೀತಿ ಹಿನ್ನೆಲೆಯಲ್ಲಿ ಕೇರಳ ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ.
ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದ್ದು, ಉದ್ಯೋಗ ಸ್ಥಳ, ಸಾರ್ವಜನಿಕ ಸಭೆ-ಸಮಾರಂಭಗಳಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದಿದೆ.
ಥಿಯೇಟರ್, ಅಂಗಡಿಗಳು ಸೇರಿದಂತೆ ಜನರು ಹೆಚ್ಚಾಗಿ ಸೇರುವ ಸ್ಥಳಗಳಲ್ಲಿ ಕೈ ಶುಚಿಗೊಳಿಸಿ ಕೊಳ್ಳಲು ಅಗತ್ಯ ಸೌಲಭ್ಯ ಒದಗಿಸಲು ನಿರ್ದೇಶಿಸಿದ್ದು, ಜನರು ಸಾಮಾಜಿಕ ಅಂತರ ಕಾಯ್ದು ಕೊಳ್ಳುವಂತೆ ಸೂಚಿಸಿದೆ. ಇದೇ ವೇಳೆ, ಅಮೆರಿಕದಲ್ಲಿ ಕೊರೊನಾ ಪ್ರಕರಣ ಹೆಚ್ಚಳಕ್ಕೆ ಕಾರಣವಾಗಿದ್ದ ಕೊರೊನಾ ಎಕ್ಸ್‌ಎಕ್ಸ್‌ಬಿ.1.5 ರೂಪಾಂತರಿಯು ಭಾರತದಲ್ಲಿ 26 ಮಂದಿಗೆ ದೃಢಪಟ್ಟಿದೆ.