Advertisement

ಕೋವಿಡ್‌ 19 ಸೋಂಕಿಗೆ ಯುವಕ ಬಲಿ

05:21 AM Jun 14, 2020 | Lakshmi GovindaRaj |

ಬೆಂಗಳೂರು: ನಗರದಲ್ಲಿ ಕೋವಿಡ್‌ 19  ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ನಡುವೆಯೇ ಇದೇ ಮೊದಲ ಬಾರಿಗೆ 23 ವರ್ಷದ ಯುವಕರೊಬ್ಬರು ಕೋವಿಡ್‌ 19 ಸೋಂಕಿನಿಂದ ನಗರದಲ್ಲಿ  ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಂಕಿನ ಲಕ್ಷಣಗಳು ಹಾಗೂ ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಜೆಪಿ ನಗರದ 23 ವರ್ಷದ ಯುವಕನನ್ನು ನಗರದ ಬೌರಿಂಗ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Advertisement

ಇವರು ಜ್ವರ, ವಾಂತಿ, ಭೇದಿಯಿಂದ ಸಮಸ್ಯೆಯನ್ನು ಎದುರಿಸುತ್ತಿದ್ದರು. ಚಿಕಿತ್ಸೆ ವೇಳೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಶುಕ್ರವಾರ ತಡರಾತ್ರಿ (ಜೂನ್‌.12)ಕ್ಕೆ ಮೃತಪಟ್ಟಿದ್ದು, ಆರೋಗ್ಯ ಇಲಾಖೆಯ ಮಾರ್ಗಸೂಚಿ ಅನುಸಾರ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಭಯದಿಂದ ಹೃದಯಾಘಾತ?: ಶಿವಾಜಿನಗರದಲ್ಲಿ ನೆಲೆಸಿದ್ದ ಯುವಕ ಅಲ್ಲಿ ಬಾಡಿಗೆ ಜಾಸ್ತಿ ನೀಡಬೇಕು ಎಂದು ಹದಿನೈದು ದಿನಗಳ ಹಿಂದಷ್ಟೇ ಜೆ.ಸಿ ನಗರಕ್ಕೆ ಮನೆ ಬದಲಾಯಿಸಿಕೊಂಡು ವಾಸವಾಗಿದ್ದರು. ಕೋವಿಡ್‌ 19 ಸೋಂಕಿನ  ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸೋಂಕು ತಗುಲಿತು ಎಂದು ಆತಂಕಕ್ಕೆ ಒಳಗಾದ ಹಿನ್ನೆಲೆಯಲ್ಲಿ ಹೃದಯಾಘಾತ ಸಂಭವಿಸಿರುವ ಸಾಧ್ಯತೆ ಇದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next