Advertisement

ಜಿಮ್ಸ್‌ನಲ್ಲಿ ಶೀಘ್ರ ಕೋವಿಡ್ 19 ಲ್ಯಾಬ್‌

04:25 PM Apr 16, 2020 | Suhan S |

ಗದಗ: ಇಲ್ಲಿನ ಜಿಲ್ಲಾಸ್ಪತ್ರೆಯ ಕೋವಿಡ್‌-19 ವಾರ್ಡ್‌ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಬುಧವಾರ ಭೇಟಿ ನೀಡಿ, ಪರಿಶೀಲಿಸಿದರು.

Advertisement

ಕೋವಿಡ್‌-19  ವೈರಸ್‌ ಸೋಂಕಿತರಿಗಾಗಿರುವ ಪ್ರತ್ಯೇಕ ವಾರ್ಡ್‌ ಹಾಗೂ ಚಿಕಿತ್ಸೆಗೆ ಸನ್ನದ್ಧಗೊಳಿಸಿರುವ ಪರಿಕರಗಳನ್ನು ಪರಿಶೀಲಿಸಿ ಮಾಹಿತಿ ಪಡೆದರು. ಆಯುಷ್‌ ಇಲಾಖೆಯ 100 ಹಾಸಿಗೆಗಳ ನೂತನ ಕಟ್ಟಡವನ್ನು ಕೊರೊನಾ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದ್ದು, ಎಲ್ಲ ಬೆಡ್‌ಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಜಿಮ್ಸ್‌ ಆಸ್ಪತ್ರೆಯಲ್ಲಿ 10 ವಯಸ್ಕರರು ಹಾಗೂ 8 ಮಕ್ಕಳ ಕಲ್ಪಿಸಬಲ್ಲ ವೆಂಟಿಲೇಟರ್‌ ವ್ಯವಸ್ಥೆ ಇದೆ. ಇನ್ನೂ 10 ವೆಂಟಿಲೇಟರ್‌ಗಳನ್ನು ಒದಗಿಸುವಂತೆ ಕೋರಿ ಸರಕಾರಕ್ಕೆ ಪತ್ರ ಬರೆಯಲಾಗಿದ್ದು, ಶೀಘ್ರವೇಪೂರೈಕೆಯಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್‌-19 ಲಕ್ಷಣಗಳಿರುವ ಹಾಗೂ ಶಂಕೆಯ ಮೇರೆಗೆ ಇಲ್ಲಿವರೆಗೆ 298 ಜನರ ಗಂಟಲಿನ ದ್ರವ ಮತ್ತು ರಕ್ತದಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಜಿಲ್ಲೆಯಲ್ಲಿ ಒಂದು ಪ್ರಕರಣ ದೃಢ ಪಟ್ಟಿತ್ತು. ಸೋಂಕಿಗೆ ಒಳಗಾಗಿದ್ದ ವೃದ್ಧೆಗೆ ಇದೇ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ದಾಖಲಾದ ಬಳಿಕ ವೃದ್ಧೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತಾದರೂ, ಹೃದಯಾಘಾತದಿಂದ ಮೃತಪಟ್ಟರು. ಆದರೆ ಕೋವಿಡ್‌-19 ಸೋಂಕಿತರಿಗೆ ಚಿಕಿತ್ಸೆ ನೀಡಲುಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಚಿವರಿಗೆ ವಿವರಿಸಿದರು.

ಜಿಪಂ ಸಿಇಒ ಡಾ| ಆನಂದ್‌ ಕೆ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸತೀಶ ಬಸರಿಗಿಡದ, ಜಿಮ್ಸ್‌ ನಿರ್ದೇಶಕ ಡಾ| ಪಿ.ಎಸ್‌. ಭೂಸರೆಡ್ಡಿ, ಡಾ| ಸುಜಾತಾ ಪಾಟೀಲ, ಡಾ| ಬಿ.ಸಿ. ಕರಿಗೌಡ್ರ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next