Advertisement

ಮತ್ತೆ 66 ಹೊಸ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 2800

09:13 AM Apr 16, 2020 | Nagendra Trasi |

ಮಹಾರಾಷ್ಟ್ರ: ಮುಂಬೈನಲ್ಲಿ ಬುಧವಾರ ಕೋವಿಡ್ 19 ವೈರಸ್ ನ 66 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಪೀಡಿತರ ಸಂಖ್ಯೆ 2,801ಕ್ಕೆ ಏರಿಕೆಯಾಗಿದೆ.

Advertisement

ದೇಶದಲ್ಲಿ ಮುಂಬೈ, ದಿಲ್ಲಿ(1561), ಜೈಪುರ್ (468), ಇಂದೋರ್ (413), ಅಹ್ಮದಾಬಾದ್ (404), ಪುಣೆ (351), ಥಾಣೆ(270), ಚೆನ್ನೈ(214), ಹೈದರಾಬಾದ್ (197), ಕಾಸರಗೋಡು(167 ಪ್ರದೇಶದಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿರುವುದಾಗಿ ವರದಿ ತಿಳಿಸಿದೆ.

ಕೋವಿಡ್ 19 ಮಾರಣಾಂತಿಕ ವೈರಸ್ ಅನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಅನ್ನು ಮೇ 3ರವರೆಗೆ ವಿಸ್ತರಿಸಿದ್ದಾರೆ. ಅಲ್ಲದೇ ಎರಡನೇ ಹಂತದ ಲಾಕ್ ಡೌನ್ ಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ನಿಯಮಾವಳಿಯನ್ನು ಬಿಡುಗಡೆ ಮಾಡಿದೆ.

ಭಾರತದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 11,439ಕ್ಕೆ ಏರಿದೆ. ಸಾವಿನ ಸಂಖ್ಯೆ 377ಕ್ಕೆ ಏರಿದೆ. ಕಳೆದ 24 ಗಂಟೆಯಲ್ಲಿ 1076 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 38 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯದ ಡಾಟಾ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next