Advertisement

ಕೋವಿಡ್ 19 ವಿರುದ್ಧ ಹೋರಾಟ; ಏ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ ಘೋಷಣೆ

09:15 AM Apr 10, 2020 | Nagendra Trasi |

ನವದೆಹಲಿ:ಕೋವಿಡ್ 19 ವೈರಸ್ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ 21 ದಿನಗಳ ಲಾಕ್ ಡೌನ್ ಏಪ್ರಿಲ್ 14ರಂದು ಅಂತ್ಯಗೊಳ್ಳಲಿದೆ. ಏತನ್ಮಧ್ಯೆ ದೇಶಾದ್ಯಂತ ಲಾಕ್ ಡೌನ್ ಮುಂದುವರಿಯಲಿದೆಯೇ ಎಂಬ ಜಿಜ್ಞಾಸೆ ಮೂಡಿದೆ. ಮತ್ತೊಂದೆಡೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಏಪ್ರಿಲ್ 30ರವರೆಗೆ ಲಾಕ್ ಡೌನ್ ಮುಂದುವರಿಸುವಂತೆ ಆದೇಶ ಹೊರಡಿಸಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಕೋವಿಡ್ 19 ವೈರಸ್ ಕ್ಷಿಪ್ರವಾಗಿ ಹರಡುತ್ತಿರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ರಾಜ್ಯಗಳ ಮುಖ್ಯಮಂತ್ರಿ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸುವ ಮೂಲಕ ಚರ್ಚೆ ನಡೆಸಿದ್ದಾರೆ. ಶನಿವಾರ ನಡೆಯಲಿರುವ ಮತ್ತೊಂದು ಸುತ್ತಿನ ಮಾತುಕತೆಯಲ್ಲಿ ಲಾಕ್ ಡೌನ್ ಗೆ ಸಂಬಂಧಿಸಿದ ಅನುಮಾನಕ್ಕೆ ಉತ್ತರ ದೊರೆಯಲಿದೆ.

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ 15 ಪ್ರಮುಖ ಹಾಟ್ ಸ್ಪಾಟ್ ಗಳನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಿದ್ದು, ಕೋವಿಡ್ 19 ವೈರಸ್ ತಡೆಯಲು ಎಲ್ಲರೂ ಕೈಜೋಡಿಸಬೇಕೆಂದು ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next