ನವದೆಹಲಿ: ಭಾರತದಲ್ಲಿ ಕೋವಿಡ್-19 ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 34 ಜನರು ಮೃತಪಟ್ಟು, 909 ಹೊಸ ಪ್ರಕರಣಗಳು ದಾಖಲಾಗಿವೆ. ಹಾಗಾಗಿ ಈ ಸಾಂಕ್ರಾಮಿಕ ರೋಗಕ್ಕೆ ದೇಶದಲ್ಲಿ ಒಟ್ಟಾರೆಯಾಗಿ 273 ಜನರು ಬಲಿಯಾಗಿದ್ದು ಸೋಂಕಿತರ ಸಂಖ್ಯೆ 8,356 ತಲುಪಿದೆ ಎಂದು ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ ಮಾಹಿತಿ ನೀಡಿದೆ.
ಶನಿವಾರ ಪ್ರಧಾನಿ ನರೇಂದ್ರ ಮೋದಿ 13 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ 4 ಗಂಟೆಗಳ ಅವಧಿ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದು ಲಾಕ್ ಡೌನ್ ಅವಧಿಯನ್ನು ಇನ್ನೂ ಎರಡು ವಾರಗಳ ಕಾಲ ವಿಸ್ತರಿಸಲಾಗಿದೆ.
ಮಹಾರಾಷ್ಟರದಲ್ಲಿ ಅತೀ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದು ಇಲ್ಲಿಯವರೆಗೂ 1761 ಪ್ರಕರಣಗಳು ದಾಖಲಾಗಿವೆ. ನಂತರ ಸ್ಥಾನದಲ್ಲಿ ಮಧ್ಯಪ್ರದೇಶ, ಗುಜರಾತ್, ದೆಹಲಿ, ತೆಲಂಗಾಣವಿದೆ.
Related Articles
ಅಮೆರಿಕಾವು ಇಟಲಿಯನ್ನು ಹಿಂದಿಕ್ಕಿ ಸಾವಿನ ಪ್ರಮಾಣದಲ್ಲಿ ಮೊದಲ ಸ್ಥಾನದಲ್ಲಿದ್ದು ಈ ದೇಶದಲ್ಲಿ 20 ಸಾವಿರಕ್ಕಿಂತ ಹೆಚ್ಚು ಜನರು ಬಲಿಯಾಗಿದ್ದಾರೆ. ಫ್ರಾನ್ಸ್ ನಲ್ಲೂ ಕೂಡ ಈ ವೈರಸ್ ಮರಣ ಮೃದಂಗ ಬಾರಿಸಿದ್ದು ಶನಿವಾರ ಒಂದೇ ದಿನ 635 ಜನರ ಕೊನೆಯುಸಿರೆಳೆದಿದ್ದಾರೆ. ಇಲ್ಲಿ ಒಟ್ಟಾರೆ ಸಾವಿನ ಪ್ರಮಾಣ 14 ಸಾವಿರದ ಗಡಿ ದಾಟಿದೆ.