Advertisement
ರಾಜ್ಯಾದ್ಯಂತ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು, ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳ ತೆರವು, ಘನತ್ಯಾಜ್ಯ ವಿಲೇವಾರಿ ಮತ್ತಿತರ ಸಾರ್ವಜನಿಕ ಮಹತ್ವದ ಪ್ರಕರಣಗಳಲ್ಲಿ ವಕೀಲರು, ಸಂಘ-ಸಂಸ್ಥೆಗಳು, ವ್ಯಕ್ತಿಗಳು ಸಲ್ಲಿಸಿರುವ ಮತ್ತು ಹೈಕೋರ್ಟ್ ಖುದ್ದು ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಮಾರ್ಚ್ ಕೊನೆಯ ವಾರ ಮತ್ತು ಎಪ್ರಿಲ್ ಮೊದಲು ಹಾಗೂ ಎರಡನೇ ವಾರದಲ್ಲಿ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ಗೆ ಅನುಪಾಲನ ವರದಿಗಳನ್ನು ಸಲ್ಲಿಸಬೇಕಿತ್ತು. ಆದರೆ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸದ್ಯ ಕೋರ್ಟ್ ಕಲಾಪಗಳು ಸ್ಥಗಿತಗೊಂಡಿರುವುದರಿಂದ ರಾಜ್ಯ ಸರಕಾರ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿದೆ.
Related Articles
ಘನತ್ಯಾಜ್ಯ ವಿಲೇವಾರಿ, ರಸ್ತೆ ಗುಂಡಿಗಳು ಮುಚ್ಚುವುದು, ಜೈಲುಗಳಲ್ಲಿ ಅಧಿಕ ಸಂಖ್ಯೆಯ ಕೈದಿಗಳಿರುವುದು ಮತ್ತು ಮೂಲಸೌಕರ್ಯಗಳ ಕೊರತೆ, ವಿಪತ್ತು ನಿರ್ವಹಣ ಕಾಯ್ದೆ ಅನುಷ್ಠಾನದಲ್ಲಿನ ಲೋಪಗಳು, ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ ಅನುಷ್ಠಾನಕ್ಕೆ ವಿಳಂಬ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರ ನೇಮಕಾತಿ ವಿವಾದ, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ, ಖಾಲಿ ಪೊಲೀಸ್ ಹುದ್ದೆಗಳ ಭರ್ತಿ, ಸರಕು ವಾಹನಗಳಲ್ಲಿ ಪ್ರಯಾಣಿಕರ ಸಂಚಾರ, ಮಕ್ಕಳ ಮೇಲಿನ ಲೈಂಗಿಕ ಶೋಷಣೆ, ಬಾಲ ನ್ಯಾಯ ಕಾಯ್ದೆ ಅನುಷ್ಠಾನ, ಮಕ್ಕಳು, ಗರ್ಭಿಣಿಯರು, ಬಾಣಂತಿಯರಲ್ಲಿ ಅಪೌಷ್ಟಿಕತೆ, ಕಲಬುರಗಿ ಕೋಟೆ ಒತ್ತುವರಿ, ಕೊಳೆಗೇರಿ ನಿವಾಸಿಗಳ ಎತ್ತಂಗಡಿ ಮೊದಲಾದ ಪಿಐಎಲ್‌ಗಳಲ್ಲಿ ಕೋರ್ಟ್ ಆದೇಶಗಳ ಪಾಲನೆ ವಿಚಾರದಲ್ಲಿ ಸರಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
Advertisement