Advertisement
ಇನ್ನು, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಾಗಲೇ ಕೇಂದ್ರ ಸರ್ಕಾರದಿಂದ ಪೂರೈಸಲಾದ ಲಸಿಕೆಗಳ ಪೈಕಿ 4.78 ಕೋಟಿ ಲಸಿಕಾ ಡೋಸ್ ಗಳು ಇನ್ನೂ ಬಳಕೆಯಾಗದೆ ಇವೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚುವರಿ ಲಸಿಕೆಗಳು ಇವೆ ಎಂದು ಕೂಡ ತಿಳಿಸಿದೆ.
Related Articles
Advertisement
ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 47,092 ಹೊಸ ಕೋವಿಡ್ 19 ಪ್ರಕರಣಗಳು 35,181 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇನ್ನು, 509 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,89,583ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿಯೂ ಶೇ.1.15ರಷ್ಟು ಹೆಚ್ಚಳವಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.97.48ಕ್ಕೆ ಏರಿಕೆಯಾಗಿದೆ.
ಪ್ರತಿ ದಿನದ ಪಾಸಿಟಿವಿಟಿ ದರ ಶೇ.2.80ರಷ್ಟಿದ್ದು, ಬುಧವಾರ (ಸೆ.01) ಸಂಜೆ 7ಗಂಟೆವರೆಗೆ ದೇಶದಲ್ಲಿ 69 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಿಲಾಗಿದ್ದು, ಇದರೊಂದಿಗೆ ದೇಶಾದ್ಯಂತ ಒಟ್ಟು 66 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
ಇದನ್ನೂ ಓದಿ : 60 ದಿನಗಳಲ್ಲಿ ಹೆಚ್ಚಳ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 47 ಸಾವಿರ ಕೋವಿಡ್ ಪ್ರಕರಣ ಪತ್ತೆ