Advertisement
ಇದೀಗ ಎಲ್ಲಾ ರಾಜ್ಯ ಸರಕಾರಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಲಾಕ್ ಡೌನ್ 4.0ರ ಮಾರ್ಗಸೂಚಿಗಳನ್ನು ಕೇಂದ್ರ ಗೃಹ ಇಲಾಖೆ ಕಳುಹಿಸಿಕೊಟ್ಟಿದ್ದು ಅದರಲ್ಲಿ ಸೂಚಿಸಲಾಗಿರುವ ಹೊಸ ಮಾರ್ಗಸೂಚಿಗಳ ವಿವರ ಹೀಗಿದೆ.
Related Articles
Advertisement
– ಯಾವುದೇ ಮೆಟ್ರೋ ರೈಲು ಸೇವೆಗಳು ಇರುವುದಿಲ್ಲ.
– ಶಾಲಾ, ಕಾಲೇಜುಗಳು, ಶಿಕ್ಷಣ/ತರಬೇತಿ ಸಂಸ್ಥೆಗಳು ಇತ್ಯಾದಿ ಯಾವುದೇ ರೀತಿಯ ಶೈಕ್ಷಣಿಕ ಸಂಸ್ಥೆಗಳು ಕಾರ್ಯಾಚರಿಸುವುದಿಲ್ಲ.
– ಹೊಟೇಲ್ ಗಳು, ರೆಸ್ಟೋರೆಂಟ್ ಸಹಿತ ಇತರೇ ಹಾಸ್ಪಿಟಾಲಿಟಿ ಸೇವೆಗಳಿಗೆ ನಿರ್ಬಂಧ ಮುಂದುವರಿಯಲಿದೆ. ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಸೇವೆಗಳು/ಹೋಂ ಡೆಲಿವರಿಗೆ ಮಾತ್ರವೇ ಅವಕಾಶ.
– ಸಿನೆಮಾ ಥಿಯೇಟರ್ ಗಳು, ಶಾಪಿಂಗ್ ಮಾಲ್ ಗಳು, ಜಿಮ್ ಗಳು, ಸ್ವಿಮ್ಮಿಂಗ್ ಪೂಲ್ ಗಳು, ಮನೋರಂಜನಾ ಪಾರ್ಕ್ ಗಳು, ಮಲ್ಟಿಪ್ಲೆಕ್ಸ್ ಗಳು, ಬಾರ್ ಮತ್ತು ರೆಸ್ಟೋರೆಂಟ್ ಗಳು, ಆಡಿಟೋರಿಯಂಗಳು, ಸಭಾಂಗಣಗಳು, ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಗಳನ್ನು ತೆರೆಯಲು ಅವಕಾಶವಿದ್ದರೂ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧವಿರುತ್ತದೆ.
– ಎಲ್ಲಾ ರೀತಿಯ ಬೃಹತ್ ಸಾಮಾಜಿಕ, ರಾಜಕೀಯ, ಕ್ರೀಡಾ, ಮನೋರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಮೇಲೆ ನಿರ್ಬಂಧ.
– ಎಲ್ಲಾ ಧರ್ಮದವರ ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹಾಗೂ ಎಲ್ಲಾ ರೀತಿಯ ಧಾರ್ಮಿಕ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ.
– ಕೋವಿಡ್ ಸೋಂಕು ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ 65 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು, ಗರ್ಭಿಣಿಯರು, 10 ವರ್ಷಕ್ಕಿಂತ ಕೆಳಗಿನ ಪ್ರಾಯದ ಮಕ್ಕಳು ಕಡ್ಡಾಯವಾಗಿ ತಮ್ಮ ಮನೆಯಲ್ಲೇ ಇರಬೇಕು.
ಕಂಟೇನ್ಮೆಂಟ್ ಪ್ರದೇಶಗಳನ್ನು ಹೊರತಾಗಿಸಿ ಉಳಿದ ಕಡೆಗಳಲ್ಲಿ ಈ ಕೆಳಗಿನ ಕಾರ್ಯಚಟುವಟಿಕೆಗಳನ್ನು ಷರತ್ತುಬದ್ಧವಾಗಿ ನಡೆಸಬಹುದಾಗಿರುತ್ತದೆ.
– ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಪರಸ್ಪರ ಒಪ್ಪಿಗೆಯ ಮೇರೆಗೆ ಅಂತರ್ ರಾಜ್ಯ ಪ್ರಯಾಣಿಕ ವಾಹನಗಳು, ಬಸ್ಸುಗಳ ಓಡಾಟಕ್ಕೆ ಅವಕಾಶ.
– ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ನಿರ್ಧಾರದ ಮೇರೆಗೆ ರಾಜ್ಯದೊಳಗಿನ ಪ್ರಯಾಣಿಕರ ವಾಹನಗಳು ಹಾಗೂ ಬಸ್ಸುಗಳ ಓಡಾಟಕ್ಕೆ ಷರತ್ತುಬದ್ಧ ಅವಕಾಶ.
– ಈಗಾಗಲೇ ಪ್ರಗತಿಯಲ್ಲಿರುವ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ಅವರವರ ಊರುಗಳಿಗೆ ತಲುಪಿಸುವ ಕಾರ್ಯ ಅಬಾಧಿತವಾಗಿ ಮುಂದುವರಿಯಲಿದೆ.
– ಕೋವಿಡ್ 19 ನಿರ್ವಹಣೆಯ ರಾಷ್ಟ್ರೀಯ ನಿರ್ದೇಶನಗಳು ಈ ಮೊದಲಿನ ಸೂಚನೆಯಂತೇ ಮುಂದುವರಿಯಲಿದೆ.